ಕಲಿತಿರುವ ವಿದ್ಯೆಯನ್ನು ಮತ್ತೊಬ್ಬರು ಕಸಿಯಲು ಸಾಧ್ಯವಿಲ್ಲ. ಸರ್ಕಾರ ಯುವಕರಿಗೆ ಜಾಗತಿಕ ಮಟ್ಟದ ಅಧ್ಯಯನಕ್ಕೆ ಅವಕಾಶ ಕಲ್ಪಿಸಿದ್ದು, ಭವಿಷ್ಯವನ್ನು ಉಜ್ವಲಿಸುವಂತೆ ಮಾಡುವುದು ನಮ್ಮ ಗುರಿ. ಬೆಂಗಳೂರು ಜಾಗತಿಕ ನಗರವಾಗಿ ಬೆಳೆಯುತ್ತಿದ್ದು, ಇಲ್ಲಿ 2 ಲಕ್ಷ ವಿದೇಶಿಗರು ಕೆಲಸ ಮಾಡುತ್ತಿದ್ದಾರೆ. ಸಿಲಿಕಾನ್ ವ್ಯಾಲಿ ಕ್ಯಾಲಿೋರ್ನಿಯಾದಲ್ಲಿ 16 ಲಕ್ಷ ಐಟಿ ವೃತ್ತಿಪರರಿದ್ದರೆ, ಬೆಂಗಳೂರಿನಲ್ಲಿ 26 ಲಕ್ಷ ಇದ್ದಾರೆ. ಪ್ರತಿ ವರ್ಷ ಲಕ್ಷಕ್ಕೂ ಹೆಚ್ಚು ಇಂಜಿನಿಯರ್, 14 ಸಾವಿರಕ್ಕೂ ಹೆಚ್ಚು ವೈದ್ಯರು ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು.