ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ

ಹೈಕಮಾಂಡ್ ಹಂತದಲ್ಲಿ ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮವಾಗಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ಕ್ಲಿಯರ್ ಮಾಡಿದ್ದಾರೆ ಪ್ರಕಟಿಸುವದೊಂದೇ ಬಾಕಿ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​ ಸುದ್ದಿಗಾರರಿಗೆ ಮಾಹಿತಿ ನೀಡಿದರು.
B.K.Hariprasad
Published on: 

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಕೊನೆ ಆಗುತ್ತಿದ್ದಂತೆ ಅಂದರೆ ಅಕ್ಟೋಬರ್ 23ರ ಬಳಿಕ ನಿಗಮ- ಮಂಡಳಿಗಳಿಗೆ ಅಧ್ಯಕ್ಷರು-ನಿರ್ದೇಶಕರ ನೇಮಕಾತಿ ಪಟ್ಟಿ ಹೊರಬೀಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತಿಳಿಸಿದರು.

ಹೈಕಮಾಂಡ್ ಹಂತದಲ್ಲಿ ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮವಾಗಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ಕ್ಲಿಯರ್ ಮಾಡಿದ್ದಾರೆ ಪ್ರಕಟಿಸುವದೊಂದೇ ಬಾಕಿ ಇದೆ ಎಂದು ಸೋಮವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಮೊದಲ ಹಂತದಲ್ಲಿ ಅಧ್ಯಕ್ಷರ ಜತೆಗೆ ನಿರ್ದೇಶಕರನ್ನೂ ನೇಮಕ ಮಾಡಲಾಗುತ್ತಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನೇ ಪರಿಗಣಿಸಲಾಗಿದೆ, ಜಿಲ್ಲಾವಾರು, ಕ್ಷೇತ್ರವಾರು, ಪ್ರದೇಶವಾರು ಪ್ರಾತಿನಿಧ್ಯ ನೀಡಲಾಗಿದೆ ಎಂದರು.

ಜಯನಗರದತ್ತ ಸೌಮ್ಯ ರೆಡ್ಡಿ ಲಕ್ಷ್ಯ

ವಿಧಾನಸಭೆ ಚುನಾವಣೆಗೆ ಜಯನಗರ ಕ್ಷೇತ್ರದತ್ತ ಹೆಚ್ಚುವರಿ ಗಮನಹರಿಸುವ ಉದ್ದೇಶದಿಂದ ಸೌಮ್ಯಾ ರೆಡ್ಡಿ ಅವರು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಬಿಟ್ಟರೆ ಬೇರಾವ ಕಾರಣಗಳಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದರು.

ಮುಂದಿನ ಚುನಾವಣೆಗೆ ಪೂರ್ವ ತಯಾರಿ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವ ವಿಷಯವನ್ನು ಮೊದಲೇ ಪ್ರಸ್ತಾಪಿಸಿದ್ದರು. ಅಲ್ಲಿಗೀಗ ಎಐಸಿಸಿ ಹೊಸ ಅಧ್ಯಕ್ಷರನ್ನು ನೇಮಿಸಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ಟಿಂಗ್ ವಿಷಯದಲ್ಲಿ ಕುಮಾರ ಸ್ವಾಮಿ ಅವರ ಹೋರಾಟದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಡುವ ಹಕ್ಕಿದೆ. ಅವರು ಹೋರಾಟ ಮಾಡಲಿ. ನಾವು ಅಡ್ಡಿಪಡಿಸುವುದಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net