ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ವತಿಯಿಂದ ಸೆ.26ರಿಂದ 30ರವರೆಗೆ "ಲೋಕ ಸಂವರ್ಧನ್ ಪರ್ವ- 2026' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ 26ರಂದು ಬೆಳಗ್ಗೆ 11ಕ್ಕೆ ಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಕಿರಣ್ ರಿಜಿಜು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಾ.ಜಿ. ಪರಮೇಶ್ವರ್, ಸಚಿವರಾದ ಕೆ.ಜೆ. ಜಾರ್ಜ್, ಜಮೀರ್ ಅಹಮದ್, ರಿಜ್ವಾನ್ ಅರ್ಷದ್, ಪ್ರಿಯಾಂಕ್ ರ್ಖಗೆ ಇತರರು ಭಾಗವಹಿಸಲಿದ್ದಾರೆ ಎಂದು ಅಲ್ಪಸಂಖ್ಯಾತರ ಇಲಾಖೆ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.