ಗಡಿ ಚೆಕ್ ಪೋಸ್ಟ್ಗಳ ರದ್ದು, ಜಿಪಿಎಸ್ ಪ್ಯಾನಿಕ್ ಬಟನ್ ಕಡ್ಡಾಯ ಸೇರಿ ದಕ್ಷಿಣ ಭಾರತದ ಲಾರಿ ಮತ್ತು ಸರಕು ಸಾಗಣೆ ವಲಯಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ಜು.30ರ ಒಳಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಲಾರಿ ಸಂಚಾರವನ್ನು ಸ್ಥಗಿತಗೊಳಿಸಿ, ಮುಷ್ಕರ ನಡೆಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.