ವಿದ್ಯುತ್ ಪೂರೈಕೆಯಲ್ಲಿ ಉಂಟಾದ ಸಮಸ್ಯೆಯಿಂದ ಈ ವ್ಯತ್ಯಯ ಸಂಭವಿಸಿದ್ದು, ಸೇವೆಯನ್ನು ಶೀಘ್ರದಲ್ಲಿ ಮರುಸ್ಥಾಪಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ತಾಂತ್ರಿಕ ಸಿಬ್ಬಂದಿ ತುರ್ತು ಕಾರ್ಯಾಚರಣೆ ನಡೆಸಿದರು. ಬಳಿಕ ವಿದ್ಯುತ್ ಪೂರೈಕೆ ಮರುಸ್ಥಾಪನೆಯಾದ ಹಿನ್ನೆಲೆಯಲ್ಲಿ ಬೆಳಗ್ಗೆ 8.45 ರಿಂದ ಮೆಟ್ರೋ ಸಂಚಾರವನ್ನು ಸಾಮಾನ್ಯ ಸ್ಥಿತಿಗೆ ತರಲಾಯಿತು. ಸೇವೆಯಲ್ಲಿ ಉಂಟಾದ ತಾತ್ಕಾಲಿಕ ವ್ಯತ್ಯಯದಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ಬಿಎಂಆರ್ಸಿಎಲ್ ವಿಷಾದ ವ್ಯಕ್ತಪಡಿಸಿದೆ.