ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವತಿಯಿಂದ ವಿವಿಧ ಭಾಗಗಳಲ್ಲಿ ನಡೆಯಲಿರುವ ಸಸಿ ನೆಡುವ ಕಾರ್ಯಕ್ರಮ ಹಾಗೂ ವಾಕಥಾನ್ನಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಶನಿವಾರ (ಜೂ.27) ಮುಂಜಾನೆ ವಿಶೇಷ ಮೆಟ್ರೋ ಸೇವೆ ಒದಗಿಸಿದೆ. ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಸುಲಭವಾಗಿ ತಮ್ಮ ಗಮ್ಯಸ್ಥಾನವನ್ನು ತಲುಪುವ ಉದ್ದೇಶದಿಂದ, ನಮ್ಮ ಮೆಟ್ರೋ ಎಲ್ಲ ಮಾರ್ಗಗಳ ಎಲ್ಲ ರ್ಟಮಿನಲ್ ನಿಲ್ದಾಣಗಳಿಂದ ಬೆಳಗ್ಗೆ 4 ಗಂಟೆಗೆ ರೈಲು ಸಂಚಾರವನ್ನು ಆರಂಭಿಸಲಿದೆ.