ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗಬಾರದು

polio-vaccination
polio-vaccination
Published on

ಪ್ರಮುಖ ಮುಖ್ಯಾಂಶಗಳು

  • * ನಗರ ಜಿಲ್ಲಾಧಿಕಾರಿ ಪಿ.ಎಸ್. ಕಾಂತರಾಜು ಸೂಚನೆ
ಬೆಂಗಳೂರು: ಈ ತಿಂಗಳ 28ರಂದು ನಿಗದಿಯಾಗಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ವಂಚಿತವಾಗದಂತೆ ನಿಗಾವಹಿಸಬೇಕು ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎಸ್. ಕಾಂತರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ಸರ್ಕಾರವು ಹೆಚ್ಚಿನ ಉತ್ತೇಜನ ನೀಡಿದೆ. ವಿವಿಧ ಇಲಾಖೆಗಳ ಸಹಕಾರದೊಂದಿಗೆ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ರಾಷ್ಟ್ರೀಯ ಪಲ್ಸ್ ಫೋಲಿಯೋ ಕಾರ್ಯಕ್ರಮದ ಬಗ್ಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಲಸಿಕೆಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.
ಆರೋಗ್ಯ ಇಲಾಖೆಯೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಶೇ.100 ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು.
"

ಜಿಲ್ಲೆಯಲ್ಲಿ 5 ವರ್ಷದೊಳಗಿರುವ ಅಂದಾಜು 2.09 ಲಕ್ಷ ಮಕ್ಕಳು ಇದ್ದು, ಒಟ್ಟು 728 ಲಸಿಕಾ ಬೂತ್, 49 ಟ್ರಾನ್ಸಿಟ್ ಟೀಂಗಳು ಮತ್ತು 46 ಮೊಬೈಲ್ ಟೀಂಗಳಿಂದ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಾಗುವುದು. ಈ ಕಾರ್ಯಕ್ಕೆ ಒಟ್ಟು 3,102 ಲಸಿಕಾ ಕಾರ್ಯಕರ್ತರು, 146 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.

- ಡಾ. ರವೀಂದ್ರನಾಥ್ ಮೇಟಿ, ನಗರ ಜಿಲ್ಲಾ ಆರೋಗ್ಯಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net