ತೆರಿಗೆಗಳ ವಂಚನೆ ಪತ್ತೆಗೆ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು. ಸಚಿವ ಆರ್.ಬಿ.ತಿಮ್ಮಾಪುರ, ವಾಣಿಜ್ಯ, ಅಬಕಾರಿ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು. ಸಚಿವ ಆರ್.ಬಿ.ತಿಮ್ಮಾಪುರ, ವಾಣಿಜ್ಯ, ಅಬಕಾರಿ ಇಲಾಖೆಗಳ ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಇಲಾಖೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
  • ಜಿಎಸ್‌ಟಿ ಇಳಿಸಿದರೂ ಸಂಗ್ರಹ ದರ ಶೇ.3ಕ್ಕೇರಲು ಶಕ್ತ
  • ತಪಾಸಣೆ ಮೂಲಕ 3,183 ಕೋಟಿ ರೂ. ತೆರಿಗೆ ಸಂಗ್ರಹ
ಬೆಂಗಳೂರು: ತೆರಿಗೆಗಳ ವಂಚನೆ, ಕಳ್ಳತನ ತಡೆಗೆ ವಿಚಕ್ಷಣಾ ದಳ ಕಾರ್ಯಾಚರಣೆ ಚುರುಕು, ಕಾರ್ಯದಕ್ಷತೆ ಹೆಚ್ಚಿಸಿಕೊಳ್ಳಬೇಕು ಎಂದು ವಾಣಿಜ್ಯ ಹಾಗೂ ಅಬಕಾರಿ ಇಲಾಖೆಗಳ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚಿಸಿದ್ದಾರೆ.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಕರೆದಿದ್ದ ಎರಡು ಇಲಾಖೆಗಳ ತೆರಿಗೆ ಸಂಗ್ರಹ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯಿದೆ. ಈ ಪೈಕಿ ನವೆಂಬರ್ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿಯಲ್ಲಿ 72,131 ಕೋಟಿ ರೂ, ನಿವ್ವಳ ಸಂಗ್ರಹವಾಗಿದೆ.
ಇದರಲ್ಲಿ ಜಿಎಸ್‌ಟಿ 53,522 ಕೋಟಿ ರೂ., ಕೆಎಸ್‌ಟಿ 17,595 ಕೋ.ರೂ ಮತ್ತು ವೃತ್ತಿ ತೆರಿಗೆ 1014 ಕೋಟಿ ರೂ. ಸೇರಿದೆ ಎಂಬ ಮಾಹಿತಿ ಪಡೆದುಕೊಂಡರು.

ಬೆಳವಣಿಗೆ ದರ ಶೇ.3

ಆರಂಭದ ಐದು ತಿಂಗಳಲ್ಲಿ ಎಪ್ರಿಲ್‌ನಿಂದ ಆಗಸ್ಟ್ ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಜಿಎಸ್‌ಟಿ ದರಗಳಲ್ಲಿ ಬದಲಾವಣೆ ನಂತರ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರ ಸಾಧ್ಯವಾಗಿದೆ.
ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದರು.

3,183 ಕೋಟಿ ರೂ. ಸಂಗ್ರಹ

ನವೆಂಬರ್ ಅಂತ್ಯದವರೆಗೆ ಸುಮಾರು 13 ಸಾವಿರ ತಪಾಸಣೆಗಳನ್ನು ಮಾಡಿದ್ದು, ತಪಾಸಣೆಯಿಂದ ರೂ. 3183 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.
ತೆರಿಗೆ ತಪ್ಪಿಸಲು ಯಾವುದೇ ಅವಕಾಶ ಇಲ್ಲದಂತೆ ಕಟ್ಟೆಚ್ಚರದಿಂದ ಕಾರ್ಯ ನಿರ್ವಹಿಸಬೇಕು. ಹಿಂದಿನ ವರ್ಷಗಳ ಅಂಕಿ ಅಂಶಗಳನ್ನು ಬಳಸಿಕೊಂಡು, ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಿ, ವಿಶ್ಲೇಷಣಾ ವಿಭಾಗವನ್ನು ಬಲಪಡಿಸಬೇಕು ಎಂದರು.
ಬೋಗಸ್ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಪ್ರಕರಣಗಳ ಮೇಲೆ ನಿಗಾವಹಿಸಿ, ಅಂತಹ ಪ್ರಕರಣಗಳು ಪತ್ತೆಯಾದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲು ಸೂಚನೆ ನೀಡಿದರು.
ಅಬಕಾರಿ ತೆರಿಗೆ
2025-26 ನೇ ಹಣಕಾಸು ಸಾಲಿನಲ್ಲಿ ರೂ. 43ಸಾವಿರ ಕೋಟಿ ಅಬಕಾರಿ ತೆರಿಗೆ ಗುರಿ ಸಂಗ್ರಹ ಗುರಿಯಿದೆ. ಈ ಪೈಕಿ ನವೆಂಬರ್ ಅಂತ್ಯದವರೆಗೆ.26,215 ಕೋಟಿ ರೂ. ಸಂಗ್ರಹಿಸಲಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.10.46ರಷ್ಟು ಬೆಳವಣಿಗೆ ದರವನ್ನು ಸಾಧಿಸಲಾಗಿದೆ. ಅಬಕಾರಿ ತೆರಿಗೆ ಸಂಗ್ರಹಕ್ಕೆ ನಿಗದಿತ ಗುರಿಯನ್ನು ಸಾಧಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ನಿರ್ದೇಶಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net