ಇದೇ ವೇಳೆ, ದಕ್ಷಿಣ ವಲಯದ ರೈಲ್ವೆ ಸುರಕ್ಷತಾ ಆಯುಕ್ತರಿಗೂ ಪತ್ರ ಬರೆದು, ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಬಿಎಂಆರ್ಸಿಎಲ್ ಕಾರ್ಯಾಚರಣೆಯಲ್ಲಿ ಅತ್ಯುನ್ನತ ಮಟ್ಟದ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ, ಅಗತ್ಯವಿದ್ದರೆ ಜವಾಬ್ದಾರಿತನವನ್ನು ಖಚಿತಪಡಿಸುವ ಕ್ರಮ ಕೈಗೊಳ್ಳಬೇಕೆಂದು ಕೋರಲಾಗಿದೆ.