ಅರಣ್ಯ ರಕ್ಷಕರಿಗೆ ಕಾನೂನು ರಕ್ಷಣೆ ನೀಡಿ

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ನಿವೃತ್ತ ಅರಣ್ಯಾಧಿಕಾರಿಗಳ ಸಂಘದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ನಿವೃತ್ತ ಅರಣ್ಯಾಧಿಕಾರಿಗಳ ಸಂಘದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ನಿವೃತ್ತ ಅಧಿಕಾರಿಗಳ ಸಂಘದಿಂದ ಪ್ರತಿಭಟನೆ
ಬೆಂಗಳೂರು: ಕರ್ತವ್ಯನಿರತ ಅರಣ್ಯಾಧಿಕಾರಿಗಳಿಗೆ ಕಾನೂನು ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ನಿವೃತ್ತ ಅರಣ್ಯಾಧಿಕಾರಿಗಳ ಸಂಘದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಂಕರಾಜು ಮಾತನಾಡಿ, ಹನೂರು ಪ್ರಕರಣದ ತನಿಖೆ ಮುಗಿಯುವವರೆಗೆ ಅಧಿಕಾರಿ, ಸಿಬ್ಬಂದಿಗೆ ಕಾನೂನು ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಅರಣ್ಯದೊಳಗೆ ಅಕ್ರಮವಾಗಿ ಯಾರೂ ಪ್ರವೇಶ ಮಾಡಬಾರದು ಎಂಬ ನಿಯಮವಿದೆ. ಕೆಲ ವ್ಯಕ್ತಿಗಳು ಆ.15ರಂದು ಕಾವೇರಿ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಆ ಸಂದರ್ಭದಲ್ಲಿ ಗಸ್ತಿನಲ್ಲಿದ್ದ ಅಧಿಕಾರಿಗಳು ಅವರನ್ನು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಮಾತು ಕೇಳದೆ ಅವರು ದಾಳಿಗೆ ಯತ್ನಿಸಿದಾಗ ಆತ್ಮ ರಕ್ಷಣೆಗಾಗಿ ಗುಂಡಿನ ದಾಳಿ ನಡೆಸಿದ್ದಾರೆ ಎಂದರು.
ಪ್ರಕರಣದ ತನಿಖೆ ಮುಗಿಯುವವರೆಗೆ ಕಾನೂನು ರಕ್ಷಣೆ ನೀಡಬೇಕು. ಒಂದು ವೇಳೆ ಸರ್ಕಾರವು ರ್ನಿಲಕ್ಷ$್ಯ ತೋರಿದರೆ ಅಧಿಕಾರಿಗಳ ಆತ್ಮಸ್ಥೆ$ರ್ಯ ಕುಗ್ಗಿಸಿದಂತಾಗುತ್ತದೆ. ಆ ನಂತರ ಧೈರ್ಯವಾಗಿ ಕೆಲಸ ಮಾಡಲು ಯಾರೂ ಮುಂದಾಗುವುದಿಲ್ಲ ಎಂದು ಎಚ್ಚರಿಸಿದರು.
ಪರಿಸರವಾದಿ ಜೋಸೆಫ್ ಮಾತನಾಡಿ, ಅರಣ್ಯ ರಕ್ಷಣೆ ಜವಾಬ್ದಾರಿ ಇಡೀ ಸಮುದಾಯದ ಮೇಲಿದೆ. ಕಳ್ಳ ಬೇಟೆಗಾರರು ಪ್ರಾಣಿಗಳ ಬೇಟೆಯಾಡಲು ಅರಣ್ಯಕ್ಕೆ ಹೋಗಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಆ ಸಂದರ್ಭದಲ್ಲಿ ಅಚಾತುರ್ಯವಾಗಿ ಗುಂಡಿನ ದಾಳಿ ನಡೆದಿದೆ. ಚಾಮರಾಜನಗರ ಅರಣ್ಯ ಅಂಚಿನಲ್ಲಿರುವ ಕೆಲವರ ಮನೆಗಳಲ್ಲಿ ಅಕ್ರಮವಾಗಿ ಬಂದೂಕುಗಳನ್ನು ಇಟ್ಟುಕೊಂಡಿದ್ದಾರೆ. ತನಿಖಾಧಿಕಾರಿಗಳು ಮನೆಗಳಿಗೆ ಭೇಟಿ ನೀಡಿ ಅಕ್ರಮವಾಗಿ ಇರಿಸಿಕೊಂಡಿರುವ ಬಂದೂಕುಗಳನ್ನು ವಶಪಡಿಸಿಕೊಳ್ಳಬೇಕು. ವ್ಯಕ್ತಿಗಳ ವಿರುದ್ಧ ಕ್ರಮಕೈಗೊಂಡು ಇಂತಹ ಪ್ರಕರಣಗಳು ಮರುಕಳುಹಿಸದಂತೆ ಸರ್ಕಾರ ಎಚ್ಚರವಹಿಸಬೇಕು ಎಂದರು.
ಸುಸ್ಥಿತ ಪರಿಸರ ಅಭಿವೃದ್ಧಿ ಟ್ರಸ್ಟ್​ ಅಧ್ಯಕ್ಷ ಪ್ರಕೃತಿ ಪ್ರಸನ್ನ, ಪರಿಸರವಾದಿಗಳಾದ ಕಿರಣ್​, ಡಾ.ಆರ್​.ಎನ್​. ವೇಣುಗೋಪಾಲ್​ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net