ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್

ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಯಿತು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಇದ್ದರು.
ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಯಿತು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲು ಪೌಷ್ಟಿಕ ಆಹಾರ ಕಿಟ್ ವಿತರಣೆ
  • ಮಾಸಿಕ 1.25 ಕೋಟಿ ಲಾನುಭವಿಗಳಿಗೆ ಇಂದಿರಾ ಕಿಟ್ ಲಭ್ಯ
  • ತಿಂಗಳಿಗೆ 466 ಕೋಟಿ ರೂ. ವೆಚ್ಚ ಅಂದಾಜಿಸಿದ ಅಧಿಕಾರಿಗಳು
ಬೆಂಗಳೂರು: ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲು ಪೌಷ್ಟಿಕ ಆಹಾರದ ‘ಇಂದಿರಾ ಕಿಟ್’ ಪಡೆಯಲು ಲಾನುಭವಿಗಳಿಗೆ ಕ್ಯೂಆರ್ ಕೋಡ್ ಸ್ಕಾೃನ್ ಕಡ್ಡಾಯ (Food kit) ಮಾಡಲಾಗಿದೆ.
ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಇಂತಹದೊಂದು ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದೆ.
ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಕ್ಯುಆರ್ ಸ್ಕಾೃನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಬೇಕು. ಕ್ಯೂಆರ್ ಕೋಡ್ ಸ್ಕಾೃನ್ ಮಾಡಿದ ನಂತರ ಪಡಿತರ ಚೀಟಿದಾರರಿಗೆ ‘ಇಂದಿರಾ ುಡ್ ಕಿಟ್’ ವಿತರಿಸಲು ಸೂಚಿಸಲಾಗಿದೆ.
ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲು ಲಾನುಭವಿಗಳ ಪುನಶ್ಚೇತನ, ಸಮಗ್ರ ಪೌಷ್ಟಿಕ ಆಹಾರ ಪೂರೈಕೆ ಉಪಕ್ರಮವಾಗಿ ತೊಗರಿಬೇಳೆ, ಖಾದ್ಯ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ ‘ಇಂದಿರಾ ಕಿಟ್’ ನೀಡಲು ಸಚಿವ ಸಂಪುಟ ಸಭೆ ಈಗಾಗಲೇ ಒಪ್ಪಿಗೆ ನೀಡಿದೆ.

ಉತ್ತಮ ಗುಣಮಟ್ಟ

ಬಿಪಿಎಲ್ ಪಡಿತ ಚೀಟಿದಾರರಿಗೆ ಈ ಕಿಟ್ ವಿತರಣೆಗೆ ಇಲಾಖೆಯಲ್ಲಿ ಮಾಡಿಕೊಂಡಿರುವ ಸಿದ್ಧತೆಗಳನ್ನು ಸಿಎಂ ಸಿದ್ದರಾಮಯ್ಯ ಪರಾಮರ್ಶಿಸಿದರು. ಕುಟುಂಬ ಸದಸ್ಯರ ಸಂಖ್ಯೆಗೆ ತಕ್ಕಂತೆ ನಿಗದಿತ ಪ್ರಮಾಣದಲ್ಲಿ ಉತ್ತಮ ಗುಣಮಟ್ಟದ ಆಹಾರ ಪದಾರ್ಥ ವಿತರಣೆಗೆ ಸೂಚಿಸಿದರು.
ಆಹಾರ್ ಕಿಟ್‌ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿಬೇಳೆ ಗರಿಷ್ಠ ಪ್ರಮಾಣದಲ್ಲಿ ನೀಡಲು ಕ್ರಮಕೈಗೊಳ್ಳಬೇಕು. ತೂಕ, ಅಳತೆ ಮತ್ತು ಉತ್ತಮ ಗುಣಮಟ್ಟದಲ್ಲಿ ಯಾವುದೇ ರಾಜಿ ಕೂಡದು ಎಂದು ತಾಕೀತು ಮಾಡಿದರು.

ಖರೀದಿ ಪ್ರಕ್ರಿಯೆ ಪಾರದರ್ಶಕ

ಇಂದಿರಾ ಕಿಟ್‌ಗೆ ಬೇಕಾದ ಆಹಾರ ಪದಾರ್ಥಗಳ ಖರೀದಿ ಪ್ರಕ್ರಿಯೆಯನ್ನು ನಾೆಡ್/ಎನ್‌ಸಿಸಿಎ್ ಮುಖೇನ ಪಾರದರ್ಶಕವಾಗಿ ನಿರ್ವಹಿಸಬೇಕು.
ಪೂರೈಸಿದ ಆಹಾರ ಕಿಟ್‌ಗಳು ನಿಗಮದ ಗೋದಾಮು/ ಸಗಟು ಮಳಿಗೆಗಳ ಮೂಲಕ ಆಯಾ ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 10ನೇ ತಾರೀಖಿನೊಳಗೆ ತಲುಪಿಸಬೇಕು.
ಹೆಚ್ಚುವರಿ ಐದು ಕೆಜಿ ಬದಲು ಪೌಷ್ಟಿಕ ಆಹಾರ ಕಿಟ್ ವಿತರಣೆ ಮಹತ್ವ ಅರಿತು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದರು.
ಸಕಾಲಕ್ಕೆ ಅರ್ಹ ಪಡಿತರ ಚೀಟಿದಾರರಿಗೆ ಆಹಾರ ಕಿಟ್ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಇಂದಿರಾ ಆಹಾರ ಕಿಟ್ ವಿತರಣೆಗೆ ಮಾಸಿಕ 446 ಕೋಟಿ ರೂ. ವೆಚ್ಚದ ಅಂದಾಜಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net