ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸಂಘಟನಾ ಸೃಜನ್ - 2 ಶುರು

ಎಐಸಿಸಿ ನಿರ್ದೇಶನದ ಮೇರೆಗೆ ಸಂಘಟನಾ ಸೃಜನ್-2 ಅಭಿಯಾನ ಆರಂಭವಾಗಿದೆ. ಇದರಡಿ 17 ಬ್ಲಾಕ್ ಕಾಂಗ್ರೆಸ್ ಸಮಿತಿ, 6 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗುವುದು ಎಂದು ಮಾಜಿ ಶಾಸಕಿ ಪೂರ್ಣಿಮಾ ತಿಳಿಸಿದರು.
ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್
ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್
Published on: 

ಬೆಂಗಳೂರು: ಮುಬರುವ ವಿಧಾನಸಭೆ ಚುನಾವಣೆಗೆ ಪೂರಕವಾಗಿ ಕಾಂಗ್ರೆಸ್ ಸಂಘಟನೆ ಬಲ ಪಡಿಸಲು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸಂಘಟನಾ ಸೃಜನ್ 2ನೇ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಸಂಘಟನಾ ಸೃಜನ್ -2 ರ ಹೊಣೆ ಹೊತ್ತ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಮಾಜಿ ಜಿಲ್ಲಾಧ್ಯಕ್ಷ ರಾಜಕುಮಾರ್, ಶ್ರೀನಿವಾಸಲು ಅವರು ಸುದ್ದಿಗೋಷ್ಠಿಯಲ್ಲಿ ಬುಧವಾರ ಈ ಬಗ್ಗೆ ಮಾಹಿತಿ ಹಂಚಿಕೊಂಡರು.

ಎಐಸಿಸಿ ನಿರ್ದೇಶನದ ಮೇರೆಗೆ ಸಂಘಟನಾ ಸೃಜನ್-2 ಅಭಿಯಾನ ಆರಂಭವಾಗಿದೆ. ಇದರಡಿ 17 ಬ್ಲಾಕ್ ಕಾಂಗ್ರೆಸ್ ಸಮಿತಿ, 6 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗುವುದು ಎಂದರು.

ಮಹಿಳಾ ಕಾರ್ಯಕರ್ತರೂ ಸಹ ಜಿಲ್ಲಾ, ಬ್ಲಾಕ್ ಅಧ್ಯಕ್ಷರಾಗಿ ಆಯ್ಕೆಯಾಗಬೇಕೆಂದು ಎಐಸಿಸಿ ಬಯಿಸಿದೆ. ಮಹಿಳೆಯರೂ ಅರ್ಜಿ ಹಾಕಬಹುದಾಗಿದೆ. ಮಹಿಳಾ ಕಾಂಗ್ರೆಸ್ ಹೊರತಾಗಿಯೂ ಪಕ್ಷದ ಅಧ್ಯಕ್ಷರಾಗಬಹುದು ಎಂದು ತಿಳಿಸಿದರು.

ನಿಷ್ಠಾವಂತ ಕಾರ್ಯಕರ್ತರನ್ನು ಬಳಸಿಕೊಂಡು ತಳಮಟ್ಟದಿಂದ ಕಾಂಗ್ರೆಸ್‌ಪಕ್ಷ ಕಟ್ಟಲು ಸಂಘಟನಾ ಸೃಜನ್ ಕೆಲಸ ಮಾಡಲಿದೆ. ಬ್ಲಾಕ್ ಅಧ್ಯಕ್ಷರ ಆಯ್ಕೆ ವೇಳೆ ಎಐಸಿಸಿ ಸೂಚಿಸಿದ ಮಾನದಂಡಗಳನ್ನು ಪಾಲಿಸಲಾಗುತ್ತದೆ.
ಪೂರ್ಣಿಮಾ, ಮಾಜಿ ಶಾಸಕಿ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net