ಪಕ್ಷ ಬಲವರ್ಧನೆಗಾಗಿ ಸಂಘಟನ್ ಸೃಜನ್ ಅಭಿಯಾನ: ಟೋನಿ ಚಮ್ಮನಿ ಹೇಳಿಕೆ

ಕೆ.ಆರ್.ಪುರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಸಂಘಟನ್ ಸೃಜನ ಅಭಿಯಾನ ಸಭೆ
ಕೆ.ಆರ್.ಪುರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಸಂಘಟನ್ ಸೃಜನ ಅಭಿಯಾನ ಸಭೆ
Published on

ಕೆ.ಆರ್.ಪುರ: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಿಷ್ಠವಾಗಿ ಕಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ಸಂಘಟನ್ ಸೃಜನ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪಕ್ಷದ ಸಂಘಟನೆ ಪ್ರಜಾಸತ್ತಾತ್ಮಕ ರೀತಿಯಲ್ಲಿ ಮತ್ತಷ್ಟು ಸದೃಢಗೊಳ್ಳಬೇಕಿದೆ ಎಂದು ಎಐಸಿಸಿ ವೀಕ್ಷಕ ಟೋನಿ ಚಮ್ಮನಿ ಹೇಳಿದರು.

ಕೆ.ಆರ್.ಪುರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಸಂಘಟನ್ ಸೃಜನ ಅಭಿಯಾನ ಸಭೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕ ಹಾಗೂ ಪ್ರಜಾಸತ್ತಾತ್ಮಕವಾಗಿ ನಡೆಯಲಿದೆ. ಪಕ್ಷದ ಪದಾಧಿಕಾರಿಗಳು ಮತ್ತು ಮುಖಂಡರ ವೈಯಕ್ತಿಕ ಅಭಿಪ್ರಾಯಗಳನ್ನು ಗೌರವದಿಂದ ಆಲಿಸಿ, ಅವುಗಳನ್ನು ರಾಷ್ಟ್ರೀಯ ನಾಯಕತ್ವಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಆಗಸ್ಟ್ 31ರೊಳಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪೂರ್ಣಗೊಳ್ಳಲಿದ್ದು, ಸಂಘಟನೆಯ ಬಲವರ್ಧನೆಗೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಕಾಂಗ್ರೆಸ್ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು ಎಲ್ಲರೂ ಕೈ ಜೋಡಿಸಬೇಕು ಎಂದರು.
ಮಾಜಿ ಸಚಿವ ಡಾ.ಸುಧಾಕರ್ ಮಾತನಾಡಿ, ಕಳೆದ ಹತ್ತ್ದುನಗಳ ಹಿಂದೆ ರಾಷ್ಟ್ರಿಯ ಹಾಗೂ ರಾಜ್ಯ ನಾಯಕರು ಅಭಿಪ್ರಾಯ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಬೆಂಗಳೂರು ಪೂರ್ವ ತಾಲ್ಲೂಕಿನ ಲ್ಲಿ ಎಐಸಿಸಿ ವೀಕ್ಷಕರು ಇನ್ನು ನಾಲ್ಕು ದಿನ ಕ್ಷೇತ್ರಗಳಲ್ಲಿಯೇ ಇದ್ದು ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರ ಆಯ್ಕೆಯಲ್ಲಿ ನಾವ್ಯಾರೂ ಹಸ್ತ ಕ್ಷೇಪ ಮಾಡುವುದಿಲ್ಲ ನೇರವಾಗಿ ವೀಕ್ಷಕರು ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಿ 6 ಜನರ ಪಟ್ಟಿ ತಯಾರಿಸಿ ಕಳುಹಿಸುತ್ತಾರೆ. ಅದರಲ್ಲಿ ಎಐಸಿಸಿಯಿಂದ ಅಂತಿಮ ಪಟ್ಟಿ ತಯಾರಾಗುತ್ತದೆ.ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತದೆ ಎಂಬ ಅಂಶವನ್ನು ಜನರಿಗೆ ಮುಟ್ಟಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕರ್ತರು ಹೆಚ್ಚಾಗಿ ಭಾಗವಹಿಸಬೇಕು ಮನವಿ ಮಾಡಿದರು.
ಈ ವೇಳೆ ಬೆಂಗಳೂರು ಪೂರ್ವ ಜಿಬಿಎ ಜಿಲ್ಲಾಧ್ಯಕ್ಷ ಡಿ.ಕೆ.ಮೋಹನ್ ಬಾಬು, ಮಾಜಿ ಸಚಿವ ನಾಗೇಶ್, ಕೆಪಿಸಿಸಿ ಉಪಾಧ್ಯಕ್ಷ ಕೆಂಚೇಗೌಡ, ಪರಿಶಿಷ್ಟ ಪಂಗಡದ ರಾಜ್ಯಾಧ್ಯಕ್ಷ ಧರ್ಮಸೇನ, ಕೆಪಿಸಿಸಿ ಪ್ರ.ಕಾರ್ಯದರ್ಶಿ ಚಾಂದ್ ಪಾಷ, ಡಿ.ಎ.ಗೋಪಾಲ್, ಮಾರತ್ತಹಳ್ಳಿ ಜಯರಾಂರೆಡ್ಡಿ, ನಲ್ಲೂರಹಳ್ಳಿ ನಾಗೇಶ್, ಮಯಾಂಕ್ ಬಾಬು ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net