ಸಚಿವರ ಮೇಲೆ ಸ್ಟಿಂಗ್ ಆಪರೇಷನ್: ಸಂಪುಟ ಸಭೆಯಲ್ಲಿ ಸಿಎಂ ಡಿಕೆಶಿ ಸ್ಫೋಟಕ ಮಾಹಿತಿ, ಸಹೋದ್ಯೋಗಿಗಳಿಗೆ ಹೈ ಅಲರ್ಟ್..! CM DK Shivakumar

ಸರ್ಕಾರದ ಪ್ರತಿಯೊಂದು ಹೆಜ್ಜೆಯನ್ನೂ ನಿಗೂಢವಾಗಿ ಗಮನಿಸಲು ಬೃಹತ್ ಖಾಸಗಿ ಏಜೆನ್ಸಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸಚಿವರ ವೈಯಕ್ತಿಕ ಭೇಟಿಗಳು, ಸಾರ್ವಜನಿಕ ಸಂವಾದಗಳು ಮತ್ತು ದೈನಂದಿನ ಚಟುವಟಿಕೆಗಳನ್ನು ಗುರಿಯಾಗಿಟ್ಟುಕೊಂಡು 'ಸ್ಟಿಂಗ್ ಆಪರೇಷನ್' ನಡೆಸಲು ಪ್ರಯತ್ನಿಸಲಾಗುತ್ತಿದೆ. ಈ ಕುರಿತು ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದಿರುವುದಾಗಿ ಸಂಪುಟ ಸಭೆಯಲ್ಲಿ ತಮ್ಮ ಸಚಿವರಿಗೆ ಸಿಎಂ ಡಿಕೆಶಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
CM DK Shivakumar
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​DK Shivakumar X platform
Published on: 

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್​ ಸರ್ಕಾರದ ಪ್ರಭಾವಿ ಸಚಿವರನ್ನು ಗುರಿಯಾಗಿಸಿಕೊಂಡು ಖಾಸಗಿ ಏಜೆನ್ಸಿಗಳ ಮುಖಾಂತರ ರಹಸ್ಯ ಕಾರ್ಯಚರಣೆ ನಡೆಸಲು ವಿಪಕ್ಷಗಳು ತೆರೆಮರೆಯಲ್ಲಿ ದೊಡ್ಡ ಮಟ್ಟದ ಕಸರತ್ತು ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ತುಂಬಾ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆಂದು ರಾಜಕೀಯ ಮೂಲಗಳು ತಿಳಿಸಿವೆ.

ಸರ್ಕಾರದ ಪ್ರತಿಯೊಂದು ಹೆಜ್ಜೆಯನ್ನೂ ನಿಗೂಢವಾಗಿ ಗಮನಿಸಲು ಬೃಹತ್ ಖಾಸಗಿ ಏಜೆನ್ಸಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸಚಿವರ ವೈಯಕ್ತಿಕ ಭೇಟಿಗಳು, ಸಾರ್ವಜನಿಕ ಸಂವಾದಗಳು ಮತ್ತು ದೈನಂದಿನ ಚಟುವಟಿಕೆಗಳನ್ನು ಗುರಿಯಾಗಿಟ್ಟುಕೊಂಡು 'ಸ್ಟಿಂಗ್ ಆಪರೇಷನ್' ನಡೆಸಲು ಪ್ರಯತ್ನಿಸಲಾಗುತ್ತಿದೆ. ಈ ಕುರಿತು ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದಿರುವುದಾಗಿ ಸಂಪುಟ ಸಭೆಯಲ್ಲಿ ತಮ್ಮ ಸಚಿವರಿಗೆ ಸಿಎಂ ಡಿಕೆಶಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Also Read
ನನ್ನನ್ನು ವಿರೋಧಿಸಿದವರೇ ಪ್ರಜಾಪ್ರಭುತ್ವದ ಶಕ್ತಿ ಏನೆಂಬುದನ್ನು ಕಲಿಸಿಕೊಟ್ಟರು: 25 ವರ್ಷಗಳ ಪಯಣ ಮೆಲುಕು ಹಾಕಿದ ನಮೋ! | Narendra Modi
CM DK Shivakumar

ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟವು ಖಾಸಗಿ ಏಜೆನ್ಸಿಗಳ ಮೂಲಕ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಷಡ್ಯಂತ್ರ ರೂಪಿಸುತ್ತಿವೆ. ಸಚಿವರು ಯಾರನ್ನು ಭೇಟಿಯಾಗುತ್ತಾರೆ? ಎಲ್ಲಿಗೆ ತೆರಳುತ್ತಾರೆ? ಎಂಬ ಪ್ರತಿಯೊಂದು ಚಲನವಲನವನ್ನು ರೆಕಾರ್ಡ್ ಮಾಡಿ ರಾಜಕೀಯವಾಗಿ ಬಳಸಿಕೊಳ್ಳುವ ಹುನ್ನಾರ ನಡೆಸುತ್ತಿವೆ ಎಂದು ಸಿಎಂ ಡಿಕೆಶಿ ಆರೋಪಿಸಿರುವುದಾಗಿ ತಿಳಿದುಬಂದಿದೆ.

ಸಚಿವರ ಹೆಸರು ಉಲ್ಲೇಖ

ಸಿಎಂ ಡಿಕೆಶಿ ಅವರು ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿ, ಈಗಾಗಲೇ ಯಾರ್ಯಾರ ಮೇಲೆ ಈ ಖಾಸಗಿ ಆಪರೇಷನ್ ಪ್ರಯೋಗವಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಗುಪ್ತಚರ ಇಲಾಖೆಯ ವರದಿಯ ಕರಡು ಪ್ರತಿಯನ್ನು ಆಧರಿಸಿ, ಸಚಿವರೆಲ್ಲರೂ ಅತ್ಯಂತ ಜಾಗರೂಕತೆಯಿಂದ ಮತ್ತು ಎಚ್ಚರಿಕೆಯಿಂದ ಇರಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಭೆಯಲ್ಲಿದ್ದ ಪ್ರತಿಯೊಬ್ಬ ಸಚಿವರಿಗೂ ತಮ್ಮ ನಡವಳಿಕೆ ಹಾಗೂ ಸಂಭಾಷಣೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ನೀಡಿರುವ ಈ ಸಂದೇಶವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ವಿಪಕ್ಷಗಳು ಹೆಣೆಯುತ್ತಿರುವ ಈ ಖಾಸಗಿ ಏಜೆನ್ಸಿಗಳ ಬಲೆಯನ್ನು ಭೇದಿಸಲು ಮತ್ತು ಅವರ ರಾಜಕೀಯ ತಂತ್ರಗಾರಿಕೆಗಳನ್ನು ಮುಂಚಿತವಾಗಿಯೇ ವಿಫಲಗೊಳಿಸಲು ಕಾಂಗ್ರೆಸ್ ನಾಯಕರು ಪ್ರತಿತಂತ್ರ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ವಿಪಕ್ಷಗಳ ಈ ರೀತಿಯ ನಡೆಗಳು ಸರ್ಕಾರದ ಅಭಿವೃದ್ಧಿ ಕಾರ್ಯಗಳ ಮೇಲಿನ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಹುನ್ನಾರ ಎಂದು ಆಡಳಿತ ಪಕ್ಷದ ನಾಯಕರು ವಾಗ್ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ. ಯಾವುದೇ ರೀತಿಯ ಬ್ಲಾಕ್‌ಮೇಲ್ ತಂತ್ರಗಳಿಗೆ ಬಗ್ಗದೆ, ಸರ್ಕಾರದ ಘನತೆಯನ್ನು ಕಾಪಾಡಿಕೊಳ್ಳಲು ಸಮಗ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

Also Read
ಆರ್​ಬಿಐ ರೆಪೋ ದರ ಏರಿಸಿರುವುದರಿಂದ ಸಾಲದ ಇಎಂಐ ಎಷ್ಟು ಹೆಚ್ಚಾಗಲಿದೆ? ಏನೆಲ್ಲ ದುಬಾರಿಯಾಗಲಿದೆ? ಹೀಗಿದೆ ಲೆಕ್ಕಾಚಾರ...RBI Repo Rate Hike
CM DK Shivakumar

ಈ ದಿಢೀರ್ ಬೆಳವಣಿಗೆಯಿಂದಾಗಿ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಬಿರುಗಾಳಿ ಎದ್ದಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವಿನ ಹಗ್ಗಜಗ್ಗಾಟ ತಾರಕಕ್ಕೇರಿದೆ. ಸಿಎಂ ಡಿಕೆಶಿ ಮಾಡಿರುವ ಸ್ಟಿಂಗ್​ ಆಪರೇಷನ್​ ಆರೋಪಕ್ಕೆ ವಿಪಕ್ಷ ನಾಯಕರುಗಳು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net