ಬೀದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿಯ ನಿಯೋಗವು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರನ್ನು ಭೇಟಿ ಮಾಡಿತು. ಈ ವೇಳೆ ಅವರು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರೊಂದಿಗೆ ಚರ್ಚಿಸಿ, ಶೀಘ್ರದಲ್ಲೇ ಬೀದಿ ವ್ಯಾಪಾರಿಗಳ ಪ್ರತಿನಿಧಿಗಳೊಂದಿಗೆ ಅಧಿಕೃತ ಸಭೆಯನ್ನು ಆಯೋಜಿಸುವುದಾಗಿ ಭರವಸೆ ನೀಡಿದರು. ಬೀದಿ ವ್ಯಾಪಾರಿಗಳ ನಿಯೋಗವು ಸಚಿವರು ಹಾಗೂ ಜಿಬಿಎ ಮುಖ್ಯ ಆಯುಕ್ತರಿಗೆ ಹಕ್ಕೊತ್ತಾಯಗಳನ್ನು ಮಂಡಿಸಿತು. ಆದರೆ, ಕಾನೂನುಬಾಹಿರ ತೆರವು ಕಾರ್ಯಾಚರಣೆ ಮುಂದುವರಿದರೆ, ಅದನ್ನು ಬೀದಿ ವ್ಯಾಪಾರ ಸ್ಥಳಗಳಲ್ಲೇ ಪ್ರತಿರೋಧಿಸಲಾಗುವುದು ಎಂದರು.