ತೆರಿಗೆಗಳ ಏರಿಕೆಯೇ ಸಾಧನೆ: ಆರ್.ಅಶೋಕ್ ಟೀಕೆ

ರಾಜ್ಯ ಬಿಜೆಪಿ ಕಚೇರಿಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಭಿತ್ತಿಪತ್ರ ಶುಕ್ರವಾರ ಬಿಡುಗಡೆ ಮಾಡಿದರು. ಸಂಸದ ಗೋವಿಂದ ಕಾರಜೋಳ, ಶಾಸಕರಾದ ಎನ್.ರವಿಕುಮಾರ್, ಸಿ.ಕೆ.ರಾಮಮೂರ್ತಿ ಇನ್ನಿತರರು ಇದ್ದರು
ರಾಜ್ಯ ಬಿಜೆಪಿ ಕಚೇರಿಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಭಿತ್ತಿಪತ್ರ ಶುಕ್ರವಾರ ಬಿಡುಗಡೆ ಮಾಡಿದರು. ಸಂಸದ ಗೋವಿಂದ ಕಾರಜೋಳ, ಶಾಸಕರಾದ ಎನ್.ರವಿಕುಮಾರ್, ಸಿ.ಕೆ.ರಾಮಮೂರ್ತಿ ಇನ್ನಿತರರು ಇದ್ದರು
Published on

ಪ್ರಮುಖ ಮುಖ್ಯಾಂಶಗಳು

  • ಸಾಲ ಮಾಡುವಲ್ಲಿ ಸಿದ್ದರಾಮಯ್ಯ ಚಾಂಪಿಯನ್
  • ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆಗೆ ಕಿತ್ತಾಟ ತೀವ್ರ
  • ರೈತರ ಪರವಾಗಿ ಎರಡು ಹಂತದ ಹೋರಾಟಕ್ಕೆ ನಿರ್ಧಾರ
ಬೆಂಗಳೂರು: ಎರಡೂವರೆ ವರ್ಷದಲ್ಲಿ ತೆರಿಗೆಗಳನ್ನು ಏರಿಸಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ. ಈ ಆಡಳಿತದ ಅವಧಿ ಕರಾಳ ವರ್ಷಗಳಾಗಿವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. R Ashok
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್‌ನಲ್ಲಿ ಚಾಂಪಿಯನ್‌ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಸಾಲ ಮಾಡುವುದರಲ್ಲಿ, ಭ್ರಷ್ಟಾಚಾರದಲ್ಲಿ, ರೈತರನ್ನು ಕೊಲ್ಲುವಲ್ಲಿ, ಜಾತಿಗಳ ಮಧ್ಯೆ ಬೆಂಕಿ ಹಚ್ಚುವಲ್ಲಿ, ಹೈಕಮಾಂಡ್‌ಗೆ ಹಣ ಕಳುಹಿಸುವಲ್ಲಿ ಚಾಂಪಿಯನ್‌ ಆಗಿದ್ದಾರೆ ಎಂದರು.
ಕಾಂಗ್ರೆಸ್‌ ಸರ್ಕಾರ ಹೋಳಾಗಿ ಸಿಎಂ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್‌ ಸಿಎಂ ಕುರ್ಚಿಗಾಗಿ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ಎಂದು ಛೇಡಿಸಿದರು.

ಜನರಿಗೆ ಸ್ಪಷ್ಟಪಡಿಸಲಿ

ಕ್ರಾಂತಿ ಇಲ್ಲ ಎಂದು ಹೇಳಿದ್ದರೂ ಎಲ್ಲರೂ ಹೈಕಮಾಂಡ್‌ಗೆ ಬಳಿಗೆ ಹೋಗಿದ್ದಾರೆ. ಸಿಎಂ ಸ್ಥಾನಕ್ಕೆ ಒಪ್ಪಂದ ನಡೆದಿದೆಯೇ ಇಲ್ಲವೇ ಎಂಬುದನ್ನು ಜನರಿಗೆ ಸರಿಯಾಗಿ ತಿಳಿಸಬೇಕು ಎಂದು ಆಗ್ರಹಿಸಿದರು.
ಆಡಳಿತ ಪಕ್ಷದ ಕಚ್ಚಾಟದಿಂದಲೇ ಗೂಗಲ್‌ ಕಂಪನಿ ಪಕ್ಕದ ರಾಜ್ಯಕ್ಕೆ ಹೋಗಿದೆ. ಬೆಂಗಳೂರು ಕಸ, ರಸ್ತೆಗುಂಡಿಯ ಸಮಸ್ಯೆಯಿಂದಾಗಿ ಉದ್ಯಮಿಗಳು ಈ ಕಡೆಗೆ ಬರುತ್ತಿಲ್ಲ. ಇಂತಹ ನಗರವನ್ನೇ ಬ್ರ್ಯಾಂಡ್‌ ಮಾಡಿದ್ದಾರೆ ಎಂದು ಆರ್.ಅಶೋಕ್ ದೂಷಿಸಿದರು.
ರೈತರ ಪರ ಹೋರಾಟ
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್‌ 27, 28 ರಂದು ಹಾಗೂ ಡಿಸೆಂಬರ್‌ 1 ಮತ್ತು 2 ರಂದು ಜಿಲ್ಲಾ ಕೇಂದ್ರಗಳಲ್ಲಿ ರೈತ ಮೋರ್ಚಾ ವತಿಯಿಂದ ಹೋರಾಟ ಮಾಡಿ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಲಾಗುವುದು.
ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ, ತುಂಗಭದ್ರಾ ಜಲಾಶಯದಿಂದ ಎರಡನೇ ಬೆಳೆಗೆ ನೀರು ಹರಿಸದೇ ಇರುವುದರಿಂದ ಅದಕ್ಕೆ ಪರಿಹಾರ, ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮೊದಲಾದ ಒತ್ತಾಯಗಳನ್ನು ಮಾಡಲಾಗುವುದು. ಈ ಮೂಲಕ ರೈತರ ಹೋರಾಟಕ್ಕೆ ಬೆಂಬಲಿಸಲಾಗುವುದು ಎಂದು ಆರ್.ಅಶೋಕ್ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net