ಟೆಂಡರ್‌ನಿಂದಾಗಿ ಕಾಂಗ್ರೆಸ್ ನಾಯಕರಿಗೆ ದೊಡ್ಡ ಮೊತ್ತದ ಕಿಕ್‌ಬ್ಯಾಕ್ ಪಡೆಯಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪದ ಬೆನ್ನಲ್ಲೇ, ಸಿಎಂ ಈ ಕ್ರಮಕ್ಕೆ ಸೂಚಿಸಿದ್ದಾರೆ. ಕಳೆದ ವಾರ ಆರೋಪ ಕೇಳಿಬಂದ ವೇಳೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ನೇತೃತ್ವದ ನಾಲ್ವರು ಹಿರಿಯ ಅಧಿಕಾರಿಗಳ ತಂಡದ ಮೂಲಕ ತನಿಖೆ ನಡೆಸಿ ವಾರದೊಳಗೆ ವರದಿ ಸಲ್ಲಿಸುವಂತೆ ಆದೇಶ ಹೊರಡಿಸಲಾಗಿತ್ತು. ಈ ವರದಿಯು ಸರ್ಕಾರಕ್ಕೆ ಇನ್ನೂ ಸಲ್ಲಿಕೆಯಾಗಿಲ್ಲ. ಹಾಗಾಗಿ ವರದಿ ಕೈಸೇರಿದ ಬಳಿಕ, ಅದರೊಳಗಿರುವ ಅಂಶಗಳು ಹಾಗೂ ಶಿಫಾರಸು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲು ಸಿಎಂ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.