ಕೆ.ಆರ್. ಪುರದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗಿನ ಒಆರ್‌ಆರ್ ರಸ್ತೆಯನ್ನು ಮೇಲ್ದರ್ಜೆಗೇರಿಸುವುದು, ಮೂಲಸೌಕರ್ಯ ಸುಧಾರಣೆ ಹಾಗೂ ವಾಹನ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರವು 450 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಈ ವ್ಯಾಪ್ತಿಯಲ್ಲಿರುವ ಪ್ರಮುಖ ಜಂಕ್ಷನ್, ಸರ್ವಿಸ್ ರಸ್ತೆ, ಫುಟ್‌ಪಾತ್, ಮೆಟ್ರೋ ಕಾಮಗಾರಿ, ಸಾರ್ವಜನಿಕ ಸಾರಿಗೆ ಸಂಪರ್ಕ ಒಳಗೊಂಡ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದಉ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಲಾಗಿದೆ ಎಂದರು.