ಅ.7ಕ್ಕೆ ಸಾರಿಗೆ ನೌಕರರ ಮುಷ್ಕರ

ಸಾರಿಗೆ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್​ 7ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.
KSRTC
strikfolder
Published on

ಬೆಂಗಳೂರು: ಸಾರಿಗೆ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್​ 7ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.

ನೌಕರರಿಗೆ 2024ರ ಜನವರಿಯಿಂದ ಅನ್ವಯವಾಗುವ ವೇತನ ಪರಿಷ್ಕರಣ ಸೌಲಭ್ಯ ಒದಗಿಸಬೇಕು. 2020ರ ವೇತನ ಹಿಂಬಾಕಿ 1,792 ಕೋಟಿ ರೂ.ಗಳನ್ನು ಪಾವತಿಸಬೇಕು ಎಂಬುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಈ ಹಿಂದೆ ಪ್ರತಿಭಟನೆ ನಡೆಸಲಾಗಿತ್ತು. ಆಗ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದ ಸರ್ಕಾರ ಇನ್ನೂ ಕಾರ್ಯಗತಗೊಳಿಸಿಲ್ಲ ಎಂದು ಸಮಿತಿಯ ಪ್ರಮುಖರಾದ ಜ್ಯೋತಿ ಅನಂತ ಸುಬ್ಬರಾಜು ದೂರಿದರು.

ಚಾಲಕರು, ನಿರ್ವಾಹಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ವಾರದ ರಜೆ ಸೌಲಭ್ಯವನ್ನು ಸಮರ್ಪಕವಾಗಿ ನೀಡಬೇಕು. ಬಾಕಿ ಇರುವ ಪಿಎಫ್​, ಗ್ರಾಚ್ಯುಟಿ, ತುಟ್ಟಿ ಭತ್ಯೆ ಸೇರಿ ವಿವಿಧ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಸಮಿತಿಯ ಪದಾಧಿಕಾರಿಗಳಾದ ಜಯದೇವರಾಜೇ ಅರಸು, ಎಚ್​.ಡಿ. ರೇವಪ್ಪ, ಗಂಡಸಿ ಸದಾನಂದ ಸ್ವಾಮಿ, ಚಂದ್ರೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net