ಸಾಮಾಜಿಕ ನ್ಯಾಯಕ್ಕಾಗಿ ಸಂಟಿತರಾಗಿ

ಬೆಂಗಳೂರು ನಗರದ ಚಂದ್ರ ಲೇಔಟ್​ನಲ್ಲಿರುವ ರಾಜ್ಯ ನೌಕರರ ಮತ್ತು ಕಾರ್ಮಿಕರ ಕೇಂದ್ರ ಕನಕ ಸಮಿತಿ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ನೇಮಕ ಸಭೆಯಲ್ಲಿ ಎಚ್​.ಎಂ. ರೇವಣ್ಣ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಟಿ.ಬಿ.ಬಳಗಾವಿ, ಬಿ.ಇ.ಗಿರೀಶ್​  ಇದ್ದರು.
ಬೆಂಗಳೂರು ನಗರದ ಚಂದ್ರ ಲೇಔಟ್​ನಲ್ಲಿರುವ ರಾಜ್ಯ ನೌಕರರ ಮತ್ತು ಕಾರ್ಮಿಕರ ಕೇಂದ್ರ ಕನಕ ಸಮಿತಿ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ನೇಮಕ ಸಭೆಯಲ್ಲಿ ಎಚ್​.ಎಂ. ರೇವಣ್ಣ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಟಿ.ಬಿ.ಬಳಗಾವಿ, ಬಿ.ಇ.ಗಿರೀಶ್​ ಇದ್ದರು.
Published on
ಬೆಂಗಳೂರು: ಸಾಮಾಜಿಕ ನ್ಯಾಯ ಪಡೆದುಕೊಳ್ಳಲು ಸಮುದಾಯ ಬಲಿಷ್ಠವಾಗಬೇಕು, ಪದಾಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್​.ಎಂ. ರೇವಣ್ಣ ಹೇಳಿದರು.
ನಗರದ ಚಂದ್ರ ಲೇಔಟ್​ನಲ್ಲಿರುವ ಕನಕ ಭವನದಲ್ಲಿ ರಾಜ್ಯ ನೌಕರರ ಮತ್ತು ಕಾರ್ಮಿಕರ ಕೇಂದ್ರ ಕನಕ ಸಮಿತಿ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ನೇಮಕ ಸಭೆಯಲ್ಲಿ ಮಾತನಾಡಿದರು.
ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕನಕದಾಸರ 500ನೇ ಜಯಂತಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಇದರಿಂದ ಗ್ರಾಮ ಮಟ್ಟದಿಂದಲೂ ಸಮುದಾಯವು ಸಂನೆಗೊಂಡಿದೆ. ಇದನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದು ಸಲಹೆ ನೀಡಿದರು.
ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಅವಕಾಶ ಕಲ್ಪಿಸುವಂತೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರನ್ನು ನಿಯೋಗ ಭೇಟಿ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಟಕಗಳ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕನಕ ಚಾರಿಟೇಬಲ್​ ಟ್ರಸ್ಟ್​ ಅಧ್ಯಕ್ಷ ಟಿ.ಬಿ.ಬಳಗಾವಿ, ಭಾರತ್​ ಎಲೆಕ್ಟ್ರಾನಿಕ್ಸ್​ ಲಿ.ನ ಉಪ ಪ್ರಧಾನ ವ್ಯವಸ್ಥಾಪಕ ಬಿ.ಇ. ಗಿರೀಶ್​, ರಾಜ್ಯ ಲೆಕ್ಕ ಇಲಾಖೆ ನಿವೃತ್ತ ಅಧಿಕಾರಿ ಆರ್​.ಎಸ್​. ಪೊಂಡೇ, ನೌಕರರ ಮತ್ತು ಕಾರ್ಮಿಕರ ಕೇಂದ್ರ ಕನಕ ಸಮಿತಿ ಅಧ್ಯಕ್ಷ ಜಿ.ನಾಗರಾಜ್​, ಸಂಸ್ಥಾಪಕ ಸಿ.ಬಸವರಾಜು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net