ಬೆಂಗಳೂರು ಮಹಾನಗರ ಸಾರಿಗೆ (ಬಿಎಂಟಿಸಿ)ಯ ಯುಪಿಐ ಕ್ಯೂಆರ್ ಕೋಡ್ ಆಧಾರಿತ ಟಿಕೆಟ್ ವಿತರಣಾ ಸೇವೆಯಲ್ಲಿ ಜು.15ರ ಸಂಜೆ ಉಂಟಾದ ತಾತ್ಕಾಲಿಕ ತಾಂತ್ರಿಕ ಸಮಸ್ಯೆಯಿಂದ ಕೆಲ ಪ್ರಯಾಣಿಕರಿಗೆ ಹಣ ಕಡಿತವಾಗಿದ್ದರೂ ಟಿಕೆಟ್ ಸಿಗದ ಘಟನೆಗಳು ನಡೆದಿವೆ. ಆದರೆ, ಸಮಸ್ಯೆಯನ್ನು ಅದೇರಾತ್ರಿ ಸಂಪೂರ್ಣವಾಗಿ ಪರಿಹರಿಸಲಾಗಿದ್ದು, ಪ್ರಸ್ತುತ ಎಲ್ಲ ಬಸ್ಗಳಲ್ಲಿ ಯುಪಿಐ ಮೂಲಕ ಟಿಕೆಟ್ ವಿತರಣೆ ಯಾವುದೇ ಅಡಚಣೆಯಿಲ್ಲದೆ ನಡೆಯುತ್ತಿದೆ ಎಂದು ಬಿಎಂಟಿಸಿ ಸ್ಪಷ್ಟಪಡಿಸಿದೆ.