3 ಸಾವಿರ ಕೋಟಿ ರೂ.ವೆಚ್ಚದಲ್ಲಿ 450 ಕಿ.ಮೀ. ವೈಟ್​ ಟಾಪಿಂಗ್| gba

ಜಿಬಿಎ
ಜಿಬಿಎ
Published on

ಪ್ರಮುಖ ಮುಖ್ಯಾಂಶಗಳು

  • ಬೆಂಗಳೂರಿನ ಕಾಮಗಾರಿಗಳ ಪರಿಣಾಮಕಾರಿ ಅನುಷ್ಠಾನ
  • ​ಸಚಿವ ಕೃಷ್ಣ ಬೈರೇಗೌಡ ಸೂಚನೆ
  • ಸಂಚಾರ ದಟ್ಟಣೆ ಪರಿಹಾರಕ್ಕೆ ಯೋಜನೆ
ವಿಜಯವಾಣಿ ಸುದ್ದಿಜಾಲ ಬೆಂಗಳೂರು
ರಾಜಧಾನಿಯಲ್ಲಿ ಬೆಂಗಳೂರು ಸ್ಮಾರ್ಟ್​ ಇನ್​ಫ್ರಾಸ್ಟ್ರಕ್ಚರ್​ ಲಿಮಿಟೆಡ್​ (ಬಿ&-ಸ್ಮೆ$ಲ್​) ವತಿಯಿಂದ ಕೈಗೆತ್ತಿಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಮಗ್ರ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ  ತಿಳಿಸಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ ಬಿ&-ಸ್ಮೆ$ಲ್​ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಚಾರ ಸಮಸ್ಯೆಗಳಿಗೆ ದೀರ್ಘಾವಧಿಯ ಪರಿಹಾರ ಒದಗಿಸಲು ಕೈಗೆತ್ತಿಕೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಈಗಾಗಲೇ ನೀಲನಕ್ಷೆ ರೂಪಿಸಿದ್ದು, ಈ ಯೋಜನೆಗಳನ್ನು ತ್ವರಿತಗತಿ ಮತ್ತು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದರು.
ಈಗಾಗಲೇ 196 ಕಿ.ಮೀ. ವೈಟ್​ ಟಾಪಿಂಗ್​ ಕಾಮಗಾರಿ ಪೂರ್ಣಗೊಂಡಿದೆ. ಹೊಸದಾಗಿ 126 ಕಿ.ಮೀ. ರಸ್ತೆ ನಿಮಾರ್ಣ ಕಾಮಗಾರಿ ಪ್ರಗತಿಯಲ್ಲಿದ್ದು, ಅದರಲ್ಲಿ 58 ಕಿ.ಮೀ. ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳಿಗೆ ವೇಗ ನೀಡಿ ಮುಂದಿನ 6 ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಈ ಸಾಲಿನಲ್ಲಿ 3 ಸಾವಿರ ಕೋಟಿ ರೂ. ವೆಚ್ಚದಲ್ಲಿ 450 ಕಿ.ಮೀ. ಉದ್ದದ ವೈಟ್​ ಟಾಪಿಂಗ್​ ರಸ್ತೆ ನಿಮಾರ್ಣಕ್ಕೆ ಡಿಪಿಆರ್​ ಸಿದ್ಧಪಡಿಸಿದೆ. ಎಲ್ಲ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಟೆಂಡರ್​ ಆಹ್ವಾನಿಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.
ಸಭೆಯಲ್ಲಿ ಬಿ-ಸ್ಮೈಲ್​ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್​, ನಿರ್ದೇಶಕ (ತಾಂತ್ರಿಕ) ಪ್ರಹ್ಲಾದ್​, ಮುಖ್ಯ ಅಭಿಯಂತರರಾದ ಮಾಲತಿ, ಮಾದೇಶ್​, ವಿಶ್ವನಾಥ್​ ಉಪಸ್ಥಿತರಿದ್ದರು.
ಸುರಂಗ ಮಾರ್ಗ ಯೋಜನೆ
ಉತ್ತರ-&ದಕ್ಷಿಣ ದಿಕ್ಕಿನಲ್ಲಿ 16.7 ಕಿ.ಮೀ. ಉದ್ದದ ಸುರಂಗ ಮಾರ್ಗ ನಿಮಾರ್ಣಕ್ಕೆ ಈಗಾಗಲೇ ಟೆಂಡರ್​ ಪ್ರಕ್ರಿಯೆ ಪೂರ್ಣಗೊಳಿಸಿ, ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಸಚಿವ ಸಂಪುಟದ ಅನುಮೋದನೆ ಬಳಿಕ ಯೋಜನೆ ಅನುಷ್ಠಾನಗೊಳ್ಳಲಿದೆ. ಪೂರ್ವ&-ಪಶ್ಚಿಮ ಸುರಂಗ ಮಾರ್ಗ ಯೋಜನೆಯಡಿ ಹಳೇ ಮದ್ರಾಸ್​ ರಸ್ತೆಯಿಂದ ಮೈಸೂರು ರಸ್ತೆಯವರೆಗೆ 22 ಕಿ.ಮೀ. ಉದ್ದದ ಸುರಂಗ ಮಾರ್ಗ ನಿಮಾರ್ಣಕ್ಕೆ ಮುಂದಿನ ಹಂತದಲ್ಲಿ ಟೆಂಡರ್​ ಆಹ್ವಾನಿಸಲಾಗುವುದು ಎಂದು ಸಚಿವರು ಹೇಳಿದರು.
ಹೊರ ವರ್ತುಲ ರಸ್ತೆ ಮರುವಿನ್ಯಾಸ
ಹೊರ ವರ್ತುಲ ರಸ್ತೆಯ ಮರುವಿನ್ಯಾಸಕ್ಕಾಗಿ 450 ಕೋಟಿ ರೂ. ವೆಚ್ಚದ ಸಮಗ್ರ ಯೋಜನೆ ರೂಪಿಸಲಾಗಿದೆ. ಮೆಟ್ರೋ ಕಾಮಗಾರಿಯೊಂದಿಗೆ ಈ ಯೋಜನೆಯನ್ನು ಏಕಕಾಲದಲ್ಲಿ ಆರಂಭಿಸಿದರೆ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸಂಚಾರಿ ಪೊಲೀಸರೊಂದಿಗೆ ಚರ್ಚಿಸಿ ಸೂಕ್ತ ಸಮಯದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ನಗರದ ಸಂಚಾರ ದಟ್ಟಣೆಯನ್ನು ಪರಿಣಾಮಕಾರಿಯಾಗಿ ಕಡಿಮೆಗೊಳಿಸಲು ಸಮಗ್ರ ಪರಿಹಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ವೈಟ್​ ಟಾಪಿಂಗ್​ ರಸ್ತೆಗಳು, ಸುರಂಗ ಮಾರ್ಗಗಳು ಹಾಗೂ ಎಲಿವೇಟೆಡ್​ ಕಾರಿಡಾರ್​ಗಳನ್ನು ನಿರ್ಮಿಸಲಾಗುತ್ತಿದೆ. ಹೊಸ ಮಾರ್ಗಗಳು ನಿಮಾರ್ಣವಾದ ನಂತರ ಪ್ರವೇಶ ಮತ್ತು ನಿರ್ಗಮನ ಪಾಯಿಂಟ್​ಗಳಲ್ಲಿ ಸಂಚಾರದಟ್ಟಣೆ ಉಂಟಾಗದಂತೆ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಬೇಕಿದೆ.

— ಕೃಷ್ಣ ಬೈರೇಗೌಡ, ಬೆಂಗಳೂರು ನಗರ ಅಭಿವೃದ್ಧಿ ಸಚಿವ


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net