ತಂತ್ರಜ್ಞಾನ, ಡಿಜಿಟಲ್ ಮಾಧ್ಯಮ ಬಳಕೆಯಿಂದ ಪತ್ರಕರ್ತರಿಗೆ ಉತ್ತಮ ಭವಿಷ್ಯ: ಹಿರಿಯ ಪತ್ರಕರ್ತ ಅಮೀನ್ ಮಟ್ಟು: Bangalore university

ಪತ್ರಿಕೋದ್ಯಮವನ್ನು ಕೇವಲ ವೃತ್ತಿಯಾಗಿ ಪರಿಗಣಿಸದೆ ತೀವ್ರ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
Inauguration of the two-week orientation programme organized by the Department of Electronic Media, Bangalore University.
ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗ ಏರ್ಪಡಿಸಿದ್ದ ಎರಡು ವಾರಗಳ ಅಭಿಶಿಕ್ಷಣ ಕಾರ್ಯಕ್ರಮ ಉದ್ಘಾಟನೆFile photo
Published on: 

ಬೆಂಗಳೂರು: ತಂತ್ರಜ್ಞಾನ ಹಾಗೂ ಡಿಜಿಟಲ್ ಮಾಧ್ಯಮದ ಪರಿಣಾಮಕಾರಿ ಬಳಕೆಯಿಂದ ಪತ್ರಕರ್ತರಿಗೆ ಹೊಸ ಅವಕಾಶಗಳಿವೆ. ಇಂದಿಗೂ ಗಟ್ಟಿಯಾದ ಪತ್ರಕರ್ತರಿಗೆ ಮನ್ನಣೆ ಇದ್ದು, ಓದುಗರ-ಪ್ರೇಕ್ಷಕರ ನಿರೀಕ್ಷೆಗಳನ್ನು ತಲುಪಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗ ಏರ್ಪಡಿಸಿದ್ದ ಎರಡು ವಾರಗಳ ಅಭಿಶಿಕ್ಷಣ ಕಾರ್ಯಕ್ರಮ ಉದ್ಘಾಟನೆಯಲ್ಲಿ ಅವರು ಮಾತನಾಡಿದರು.

ಪತ್ರಿಕೋದ್ಯಮವನ್ನು ಕೇವಲ ವೃತ್ತಿಯಾಗಿ ಪರಿಗಣಿಸದೆ ತೀವ್ರ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಹಿರಿಯ ನಟ ದೊಡ್ಡಣ್ಣ ಮಾತನಾಡಿ, ವೃತ್ತಿ ಜೇವನದಲ್ಲಿ ಯಶಸ್ವಿಯಾಗಲು ವಿನಯತೆ ಹಾಗೂ ಪ್ರಾಮಾಣಿಕತೆ ಮುಖ್ಯ, ಉತ್ತಮ ನಡವಳಿಕೆ ಮಾಧ್ಯಮ ಕ್ಷೇತ್ರದಲ್ಲಿ ಉನ್ನತಿ ಸಾಧಿಸಲು ನೆರವಾಗುತ್ತದೆ ಎಂದು ಹೇಳಿದರು.

ಚಲನಚಿತ್ರ ನಿರ್ಮಾಣದ ಆರಂಭಿಕ ದಿನಗಳನ್ನು ಮೆಲುಕು ಹಾಕಿದ ಅವರು, ಕನ್ನಡ ಚಲನಚಿತ್ರದ ದಿಗ್ಗಜ ನಟರೊಂದಿಗಿನ ತಮ್ಮ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಛಾಯಾಗ್ರಾಹಕ ಅಶೋಕ್ ಕಶ್ಯಪ್ ಮಾತನಾಡಿ, ಹಿಂದೆ ಚಲನಚಿತ್ರ ವೃತ್ತಿಪರ ತರಬೇತಿ ಪಡೆಯಲು ಅವಕಾಶ ಇರಲಿಲ್ಲ. ಇಂದಿನ ವಿದ್ಯಾರ್ಥಿಗಳು ಚಲನಚಿತ್ರ ನಿರ್ಮಾಣ ಶಿಕ್ಷಣವನ್ನು ಔಪಚಾರಿಕವಾಗಿ ಕಲಿಯಲು ಅವಕಾಶ ಇದೆ. ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ವಿದ್ಯುನ್ಮಾನ ಮಾಧ್ಯಮ ವಿಭಾಗದ ಸಂಯೋಜಕಿ ಪ್ರೊ. ವಾಹಿನಿ, ವಿಭಾಗದ ಪ್ರಾಧ್ಯಾಪಕಿ ಪ್ರೊ. ಆರ್. ರಾಜೇಶ್ವರಿ ಮತ್ತು ವಿವಿಧ ಸ್ನಾತಕೋತ್ತರ ವಿಭಾಗಗಳ ಪ್ರಾಧ್ಯಾಪಕರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net