ಸರಣಿ ಅಪಘಾತದಲ್ಲಿ 8 ಕಾರು ಜಖಂ

 8 ಕಾರುಗಳು ಜಖಂ ಆಗಿವೆ.
8 ಕಾರುಗಳು ಜಖಂ ಆಗಿವೆ.
Published on
ರಾಮನಗರ: ಜಯಪುರ ಗೇಟ್​ ಸಮೀಪ ಶನಿವಾರ ಮಧ್ಯಾಹ್ನಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮಂಡ್ಯ ಜಿಲ್ಲೆ ಕೆ.ಆರ್​.ಪೇಟೆ ಮಾಜಿ ಶಾಸಕ ಬಿ.ಕೆ.ಚಂದ್ರಶೇಖರ್​ ಹಾಗೂ ಮತ್ತವರ ಕಾರಿನ ಚಾಲಕ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ 8 ಕಾರುಗಳು ಜಖಂಗೊಂಡಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವುದನ್ನು ಹೊರತುಪಡಿಸಿದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಹೈವೇನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರಿಗೆ ಹಿಂದಿನಿಂದ ಬಂದ ಮತ್ತೊಂದು ಕಾರು ಡಿಕ್ಕಿಹೊಡೆದಿದೆ. ಹೀಗೆ ಒಂದರ ಹಿಂದೆ ಒಂದರಂತೆ 8 ಕಾರುಗಳು ಡಿಕ್ಕಿಯಾಗಿ ಜಖಂ ಆಗಿವೆ.
ಮಾಜಿ ಶಾಸಕರ ಕಾರೂ ಜಖಂ
ಸರಣಿ ಅಪಘಾತದಲ್ಲಿ ಕೆ.ಆರ್​.ಪೇಟೆ ಮಾಜಿ ಶಾಸಕ ಬಿ.ಕೆ.ಚಂದ್ರಶೇಖರ್​ ಅವರ ಕಾರು ಜಖಂಗೊಂಡಿದೆ. ಮಾಜಿ ಶಾಸಕರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ನಿಯಂತ್ರಣ ತಪ್ಪಿ ಮುಂದೆ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಟನೆಯಿಂದ ಕೆಲಕಾಲ ಬೆಂ&ಮೈ ಎಕ್ಷಪ್ರೆಸ್​ ವೇನಲ್ಲಿ ಸಂಚಾರ ವ್ಯತ್ಯಯವಾಗಿತ್ತು. ಗಾಯಗೊಂಡವರಿಗೆ ರಾಮನಗರ ಜಿಲ್ಲಾಸ್ಪತ್ರೆ ಹಾಗೂ ಇತರ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ರಾಮನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರ ಕಾರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net