ಫಾಮ್ರ್ ಹೌಸ್ ಗೇಟ್ ಬಳಿಯೇ ದುಷ್ಕರ್ಮಿಗಳು ನಾಡಬಾಂಬ್ ಇಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಗಿರಿ, ಗ್ರಾಮಾಂತರ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ವಿಕಾಸ್ಗೌಡ, ಕೋಡಿಹಳ್ಳಿ ಸಬ್ಇನ್ಸ್ಪೆಕ್ಟರ್ ಪ್ರದಿಪ್ ಮತ್ತು ಸಿಬ್ಬಂದಿ, ಬಾಂಬ್ ನಿಷ್ಕಿಯ ದಳ ಭೇಟಿ ನೀಡಿ ಪರಿಶೀಲಿಸಿ ಎಫ್ಎಸ್ಎಲ್ ಪರೀೆಗೆ ಒಳಪಡಿಸಿದ್ದಾರೆ. ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನಲ್ಲಿ ಇತ್ತೀಚೆಗೆ ಕಾಡು ಪ್ರಾಣಿಗಳ ಭೇಟೆಗಾಗಿ ನಾಡಬಾಂಬ್ ಬಳಕೆಯಲ್ಲಿದೆ. ಸ್ಫೋಟದ ಹಿನ್ನೆಲೆಯಲ್ಲಿ ಹಲವು ಸಂಶಯಗಳು ವ್ಯಕ್ತವಾಗಿದ್ದು, ಸ್ಥಳಿಯರು ಆತಂಕ ವ್ಯಕ್ತಪಡಿಸಿದ್ದಾರೆ.