ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಹರಿಕಾರ

  ರಾಮನಗರದಲ್ಲಿ ನಡೆದ ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬೋರೇಗೌಡ, ಒಕ್ಕೂಟದ ಅಧ್ಯಕ್ಷ ನಾಗರಾಜು, ಉಮೇಶ್ ಮುಂತಾದವರು ಉದ್ಘಾಟಿಸಿದರು.
ರಾಮನಗರದಲ್ಲಿ ನಡೆದ ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬೋರೇಗೌಡ, ಒಕ್ಕೂಟದ ಅಧ್ಯಕ್ಷ ನಾಗರಾಜು, ಉಮೇಶ್ ಮುಂತಾದವರು ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬೋರೇಗೌಡ ಹೇಳಿಕೆ
  • ಡಿ. ದೇವರಾಜ ಅರಸುರ ಜನ್ಮ ದಿನ

ರಾಮನಗರ

ಶೋಷಿತರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲ ಸಮುದಾಯಗಳ ಸಾವಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಶ್ರಮಿಸಿದ ಮಹಾನ್ ಚೇತನ ಡಿ. ದೇವರಾಜ ಅರಸು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬೋರೇಗೌಡ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ರಾಮನಗರ ತಾಲೂಕು ಆಡಳಿತ, ತಾಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ಗುರುವಾರ ಆಯೋಜಿಸಿದ್ದ ಸಾವಾಜಿಕ ಕ್ರಾಂತಿಯ ಹರಿಕಾರ ವಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರದಲ್ಲಿ ಮಾತನಾಡಿದರು.

ದೇವರಾಜು ಅರಸು ಅವರು ರೂಪಿಸಿದ ಜನಪರ ನೀತಿಗಳು ಹಾಗೂ ಆದರ್ಶ ಮೌಲ್ಯಗಳು ಇಂದಿಗೂ ನಮ್ಮೆಲ್ಲರಿಗೂ ದಾರಿದೀಪವಾಗಿವೆ. ಯುವಪೀಳಿಗೆಯು ಅವರ ಚಿಂತನೆಗಳನ್ನು ಅರಿತುಕೊಂಡು ಸವಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

1915ರ ಆಗಸ್ಟ್ 20ರಂದು ಜನಿಸಿದ ದೇವರಾಜ ಅರಸು ಅವರು 1972ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ರಾಜ್ಯದ ಸಾವಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದರು. ನಾಲ್ವಡಿ ಕೃಷ್ಣರಾಜ ಒಡೆಯರು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಾತಿ ಸೇರಿ ಹಲವು ಕ್ರಮಗಳನ್ನು ಕೈಗೊಂಡಿದ್ದರೆ. ಅದೇ ಆಶಯವನ್ನು ಮುಂದುವರಿಸಿದ ದೇವರಾಜ ಅರಸರು ಹಿಂದುಳಿದ ವರ್ಗಗಳಿಗೆ ಸಾವಾಜಿಕ ನ್ಯಾಯ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿದರು.

ಜಿಲ್ಲಾ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಜಿ. ನಾಗರಾಜು ವಾತನಾಡಿ, ಹಾಸ್ಟೆಲ್‌ಗಳು ಸೇರಿ ವಿವಿಧ ಇಲಾಖೆಗಳ ಸೌಲಭ್ಯ ಪಡೆದು ಶಿಕ್ಷಣ ಪಡೆಯುತ್ತಿರುವ ಮಕ್ಕಳು ದೇವರಾಜ ಅರಸು ಅವರ ಆಶಯಗಳನ್ನು ಮುಂದುವರಿಸುತ್ತಿದ್ದಾರೆ. ಯಾವುದೇ ಭೇದಭಾವವಿಲ್ಲದೆ ಎಲ್ಲ ಮಕ್ಕಳಿಗೂ ಸವಾನ ಅವಕಾಶ ಕಲ್ಪಿಸುವ ಮೂಲಕ ಸವಾಜದ ಅಭಿವೃದ್ಧಿಗೆ ಅವರು ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಜಾನಪದ ಲೋಕದ ಕ್ಯೂರೇಟರ್ ಡಾ.ಯು.ಎಂ.ರವಿ, ದೇವರಾಜ ಅರಸರು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಆಶಯದೊಂದಿಗೆ ಸವಾಜದ ಎಲ್ಲ ವರ್ಗದ ಜನರಿಗೂ ಸವಾನ ಅವಕಾಶ ಕಲ್ಪಿಸಲು ಹೋರಾಡಿದ ಧೀಮಂತ ನಾಯಕರು. ಅವರು ಮೇಲ್ವರ್ಗದಿಂದ ಹಿಡಿದು ತಳಸಮುದಾಯದ ಪೌರಕಾರ್ಮಿಕರವರೆಗೆ ಪ್ರತಿಯೊಬ್ಬರಿಗೂ ಸವಾನ ಅವಕಾಶ ದೊರೆಯಬೇಕು. ಆರ್ಥಿಕ ಸ್ವಾತಂತ್ರ್ಯದ ಜತೆಗೆ ಸಾವಾಜಿಕ ಗೌರವ ಮತ್ತು ವಾನಸಿಕ ನೆಮ್ಮದಿಯೂ ದೊರೆಯಬೇಕು ಎಂಬುದು ಅವರ ಆಶಯವಾಗಿತ್ತು ಎಂದರು.

ಭೂವಾಲೀಕರ ಕುಟುಂಬದಲ್ಲಿ ಜನಿಸಿದರೂ ದೇವರಾಜ ಅರಸು ಅವರು ಶ್ರಮಕ್ಕೆ ಅಪಾರ ಗೌರವ ನೀಡುತ್ತಿದ್ದರು. ತಮ್ಮ ಮನೆಯಲ್ಲಿಯೇ ಕಾರ್ಮಿಕರೊಂದಿಗೆ ಆತ್ಮೀಯವಾಗಿ ಬೆರೆತು ಕೆಲಸ ವಾಡುತ್ತಿದ್ದರು. ಶಾಸಕರಾಗಿದ್ದ ಸಂದರ್ಭದಲ್ಲಿಯೂ ಗುದ್ದಲಿ ಹಿಡಿದು ಕೆಲಸ ವಾಡುತ್ತಿದ್ದ ಅವರು ಶ್ರಮಜೀವಿಗಳೊಂದಿಗೆ ಸ್ನೇಹ ಮತ್ತು ಸವಾನತೆಯ ಮನೋಭಾವದಿಂದ ನಡೆದುಕೊಳ್ಳುತ್ತಿದ್ದರು. ಭೂವಾಲೀಕ ಮತ್ತು ಕಾರ್ಮಿಕ ಎಂಬ ಭೇದವಿಲ್ಲದೆ ಎಲ್ಲರನ್ನೂ ಸವಾನ ದೃಷ್ಟಿಯಿಂದ ನೋಡುತ್ತಿದ್ದರು ಎಂದರು.

ಪಿ.ಯು.ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಮುಖಂಡರನ್ನು ಸನ್ಮಾನಿಸಲಾಯಿತು.

ರಾಮನಗರ ಜಿಲ್ಲಾ ಹಿಂದುಳಿದ ಜಾತಿಗಳ ಮಹಾ ಒಕ್ಕೂಟ (ರಿ)ದ ಕಾರ್ಯದರ್ಶಿ ನಾರಾಯಣ್ ಟಿ.ವಿ., ಮುಖಂಡರಾದ ಡಿ. ಉಮೇಶ್, ರಾಜು, ದೇವರಾಜು, ಲೋಕೇಶ್, ಮಂಟೇದಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸತೀಶ್ ಮುಂತಾದವರು ಇದ್ದರು.

ಮೀಸಲಾತಿ ವ್ಯವಸ್ಥೆಗೆ ಬಲ!

ಕನ್ನಡ ಭಾಷೆಯ ಅಭಿವೃದ್ಧಿಗೂ ದೇವರಾಜ ಅರಸುಮಹತ್ವದ ಕೊಡುಗೆ ನೀಡಿದ್ದಾರೆ. ಕರ್ನಾಟಕದ ಕಚೇರಿಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು ಎಂಬ ನಿಲುವಿನೊಂದಿಗೆ ಕನ್ನಡದ ಬಳಕೆ ಮತ್ತು ಅಭಿವೃದ್ಧಿಗೆ ಒತ್ತು ನೀಡಿದರು. ಕವಿಗಳು ಹಾಗೂ ಸಾಹಿತಿಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೂ ಸಹಕಾರ ನೀಡಿದ್ದರು. ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ದೊರೆಯಬೇಕು ಎಂಬ ಉದ್ದೇಶದಿಂದ ಮೀಸಲಾತಿ ವ್ಯವಸ್ಥೆಗೆ ಬಲ ನೀಡಿದರು. ಸಾವಾಜಿಕ ನ್ಯಾಯದ ಪರವಾಗಿ ಅವರು ಕೈಗೊಂಡ ಕ್ರಮಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಜಾನಪದ ಲೋಕದ ಕ್ಯೂರೇಟರ್ ಡಾ.ಯು.ಎಂ.ರವಿ ಹೇಳಿದರು.

ಹಿಂದುಳಿದ ವರ್ಗಗಳ ಆಶಾಕಿರಣ

ದೇವರಾಜ ಅರಸು ಅವರು ರಾಜ್ಯದ ಹಿಂದುಳಿದ ವರ್ಗಗಳ ಆಶಾಕಿರಣ, ಸವಾಜದಲ್ಲಿ ಮೇಲುಕೀಳು ಎಂಬ ಭೇದಭಾವವಿಲ್ಲದೆ ಪ್ರತಿಯೊಬ್ಬರಿಗೂ ಸವಾನ ಅವಕಾಶ ದೊರೆಯಬೇಕು ಎಂಬುದು ಅವರ ಕನಸಾಗಿತ್ತು. ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಹಾಗೂ ಸಾವಾಜಿಕ ಪ್ರಗತಿಗೆ ದೇವರಾಜ ಅರಸು ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರು ಸ್ಥಾಪಿಸಿದ ಹಿಂದುಳಿದ ವರ್ಗಗಳ ಇಲಾಖೆಯ ಮೂಲಕ ಅನೇಕ ಮಕ್ಕಳಿಗೆ ಶಿಕ್ಷಣ ಮತ್ತು ಉತ್ತಮ ಭವಿಷ್ಯಕ್ಕೆ ದಾರಿದೀಪವಾಗಿದ್ದಾರೆ ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಜಿ. ನಾಗರಾಜು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net