ಮೈಸೂರಿನ ಸೂರ್ಯ (40) ಮೃತ. ಶನಿವಾರ ರಾತ್ರಿ ನೆಲಮಂಗಲ ಕಡೆಯಿಂದ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡ ಸೂರ್ಯ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಮುಂಜಾನೆ ಮೃತಪಟ್ಟಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.