ಅಪ್ರಾಪ್ತ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಬಂಧನ

ನಂದೀಶ್​.
ನಂದೀಶ್​.
Published on
ಬಾಗೇಪಲ್ಲಿ: ತಾಲೂಕಿನಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂದಿಸಿ ಆರೋಪಿಯನ್ನು ಬಾಗೇಪಲ್ಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ನಂದೀಶ್​(27) ಎಂಬಾತ ಬಂಧಿತ. ಪಟ್ಟಣದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಬಾಗೇಪಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿರುವ ಟನೆ ಶನಿವಾರ ಬೆಳಕಿಗೆ ಬಂದಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ. 17 ವರ್ಷದ ವಿದ್ಯಾರ್ಥಿನಿ ಮೇಲೆ ನಂದೀಶ್​ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದ್ದು ಸಂತ್ರಸ್ತ ಬಾಲಕಿ ಹೊಟ್ಟೆ ನೋವು ಚಿಕಿತ್ಸೆಗೆ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾಗ ಮಗುವಿಗೆ ಜನ್ಮ ನೀಡಿದ್ದಳು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net