ತಾಲೂಕಿನ ಚಿಕ್ಕೇನಹಳ್ಳಿ ಸಮೀಪದ ಕೆಂಬರಲು ಗ್ರಾಮದ ಸಾಗರ್(24) ಮೃತ. ರಾಮನಗರ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಬೊಲೆರೋ ಡಿಕ್ಕಿಯಾದ್ದು, ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಗ್ರಾಮಾಂತರ ಪೊಲೀಸ್ ಸಬ್ಇನ್ಸ್ಪೆಕ್ಟರ್ ಆಕಾಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.