ಬಿಡದಿ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮೈಸೂರು ಹೆದ್ದಾರಿಯ ಶೇಷಗಿರಿಹಳ್ಳಿ ಬಳಿ ನಡೆದಿದೆ.
ಹೊಂಬಯ್ಯ( 54) ಮೃತ ವ್ಯಕ್ತಿಯಾಗಿದ್ದು ಶೇಷಗಿರಿಹಳ್ಳಿ ಕಾಲೋನಿ ನಿವಾಸಯಾಗಿದ್ದಾರೆ. ಶೇಷಗಿರಿಹಳ್ಳಿಯ ಟೋಲ್ ಪ್ಲಾಜಾ ಬಳಿ ಹೊಸದಾಗಿ ನಿರ್ಮಾಣ ವಾಗುತ್ತಿರುವ ಸತ್ವ ಅಪಾರ್ಟ್ ಮೆಂಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಹಾಗಿ ಕೆಲಸ ಮಾಡುತ್ತಿದ್ದರು.
ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಲು ರಾತ್ರಿ 7.30 ರ ವೇಳೆ ಹೆದ್ದಾರಿ ದಾಟುತ್ತಿದ್ದ ವೇಳೆ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಹೊಂಬಯ್ಯ ಅವರ ತಲೆ ಸೇರಿದಂತೆ ಇತರೆ ಭಾಗಗಳಿಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.