ಡಿವೈಡರ್​ಗೆ ಡಿಕ್ಕಿಯಾಗಿ ಬೈಕ್​ಸವಾರ ಸಾವು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಮಾಗಡಿ: ತಾಲೂಕಿನ ಹುಚ್ಚಹನುಮೇಗೌಡನ ಪಾಳ್ಯದಲ್ಲಿ ಡಿವೈಡರ್​ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್​ನ ಆರ್​.ರಾಕೇಶ್​ ಮೃತ.
ಬೆಂಗಳೂರಿನ ದೊಮ್ಮಸಂದ್ರ ಕೆಪಿಟಿಸಿಎಲ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಕೇಶ್​ ಸ್ವಗ್ರಾಮಕ್ಕೆ ಬೈಕ್​ನಲ್ಲಿ ತೆರಳುವಾಗ ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ತೀವ್ರ ರಕ್ತ ಸ್ರಾವವಾಗಿದೆ ಎನ್ನಲಾಗಿದೆ. ಮೃತದೇಹವನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದ್ದು, ಮಾಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net