ರಾಜಕೀಯ ಲಾಭಕ್ಕೆ ಮಹಿಳಾ ಮಸೂದೆ ತಂದ ಬಿಜೆಪಿ

ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕೋಕಿಲಾರಾಣಿ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಿತು.
ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕೋಕಿಲಾರಾಣಿ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೋಕಿಲಾ ರಾಣಿ ಆರೋಪ
  • ಪಂಚ ರಾಜ್ಯಗಳ ಚುನಾವಣೆ ಲಾಭ ಪಡೆಯಲು ಬಿಜೆಪಿ ಹುನ್ನಾರ
ರಾಮನಗರ: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುವ ಮಸೂದೆಯನ್ನು ತರಾತುರಿಯಲ್ಲಿ ಮಂಡಿಸಿರುವುದರ ಹಿಂದೆ, ಪಂಚ ರಾಜ್ಯಗಳ ಚುನಾವಣೆಗಳಲ್ಲಿ ಲಾಭ ಪಡೆಯುವ ಉದ್ದೇಶವಿತ್ತು. ಇದರಿಂದಾಗಿಯೇ ಮಸೂದೆಗೆ ಸೋಲಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಕೋಕಿಲಾ ರಾಣಿ ಹೇಳಿದರು.
ಬುಧವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಮಸೂದೆಯು 2023ರಲ್ಲೇ ಮಂಡನೆಯಾಗಿ ಸಂಸತ್ತಿನಲ್ಲಿ ಒಪ್ಪಿಗೆ ಪಡೆದು ಕಾಯ್ದೆಯಾಗಿತ್ತು. ಆದರೆ, ಜನಗಣತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಬಳಿಕ, ಸಂವಿಧಾನಕ್ಕೆ ತಿದ್ದುಪಡಿ ತಂದು 2027ರ ಚುನಾವಣೆ ಹೊತ್ತಿಗೆ ಜಾರಿಗೆ ತರುವುದಾಗಿ ಕೇಂದ್ರ ಸರ್ಕಾರ ಪೂರ್ವ ಷರತ್ತು ವಿಧಿಸಿತ್ತು.
ಆದರೆ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮತದಾರರ ತನ್ನತ್ತ ಸೆಳೆಯುವ ಉz್ದÉÃಶದಿಂದ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯೊಂದಿಗೆ ಮಹಿಳಾ ಮೀಸಲಾತಿಯನ್ನು ತರಾತುರಿಯಲ್ಲಿ ಮಂಡಿಸಿದೆ. ನಿರೀಕ್ಷೆಯಂತೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ನೇತೃತ್ವದಲ್ಲಿ ವಿರೋಧ ಪಕ್ಷಗಳು ಮಸೂದೆ ವಿರುದ್ಧ ಮತ ಚಲಾಯಿಸಿವೆ ಎಂದರು.
ಇದರ ಅರಿವಿದ್ದ ಬಿಜೆಪಿಯು, ಮಸೂದೆಗೆ ಆಗಿರುವ ಸೋಲನ್ನೇ ತನ್ನ ಚುನಾವಣಾ ಪ್ರಚಾರದ ಅಸ್ತç ಮಾಡಿಕೊಂಡು ವಿರೋಧ ಪಕ್ಷಗಳನ್ನು ಟೀಕಿಸುತ್ತಾ, ಮಹಿಳಾ ವಿರೋಧಿಗಳು ಎಂಬ ಪಟ್ಟ ಕಟ್ಟಲು ಮುಂದಾಗಿದೆ. ಅವರಿಗೆ ನಿಜವಾಗಲೂ ಮಹಿಳಾ ಕಾಳಜಿ ಇದ್ದಿದ್ದರೆ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಸೂದೆ ಮಂಡಿಸಬೇಕಿತ್ತು.
ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಒಟ್ಟಿಗೆ ಮಂಡಿಸಿದ್ದು ಯಾಕೆ? ಇದರಲ್ಲೇ ಬಿಜೆಪಿಯ ಗೋಸುಂಬೆತನ ಪ್ರದರ್ಶನವಾಗಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷ ಯಾವಾಗಲೂ ಮಹಿಳಾ ಪರವಾದ ಗಟ್ಟಿ ದನಿಯನ್ನು ಹೊಂದಿದೆ. ಮಹಿಳೆಯರ ಸಬಲೀಕರಣದ ಕುರಿತು ಬಿಜೆಪಿಯಿಂದ ನಾವು ಪಾಠ ಕಲಿಯಬೇಕಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ ಶೇ 33ರಷ್ಟು ಹಾಗೂ ರಾಜ್ಯದಲ್ಲಿ ಶೇ 50ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಸದಸ್ಯೆ ಕಲ್ಪನಾ ಶಿವಣ್ಣ ಮಾತನಾಡಿ, ಮಹಿಳಾ ಮೀಸಲಾತಿ ಮಸೂದೆ ಜೊತೆಗೆ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಒಪ್ಪಿಗೆ ಪಡೆಯಲು ಬಿಜೆಪಿ ಮಾಡಿದ್ದ ಹುನ್ನಾರಕ್ಕೆ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಸೋಲುಂಟು ಮಾಡಿವೆ. ಪುನರ್ ವಿಂಗಡಣೆಗೆ ಪ್ರತ್ಯೇಕ ಆಯೋಗ ಇದ್ದರೂ, ಸರ್ಕಾರವೇ ಇದನ್ನು ಕೈಗೆತ್ತಿಕೊಂಡಿದ್ದು ಯಾಕೆ? ಎಂದು ಪ್ರಶ್ನಿಸಿದರು. ಬಿಜೆಪಿಗೆ ನಿಜವಾಗಿಯೂ ಮಹಿಳಾ ಪರ ಕಾಳಜಿ ಇದ್ದಿದ್ದರೆ 2023ರಲ್ಲೇ ಯಾಕೆ ಅದನ್ನು ಜಾರಿಗೆ ತರಲಿಲ್ಲ. ಆಗ ಈ ಕುರಿತು ಒತ್ತಾಯಿಸಿದ್ದ ವಿರೋಧ ಪಕ್ಷಗಳಿಗೆ ಯಾಕೆ ಸ್ಪಂದಿಸಲಿಲ್ಲ. ಕ್ಷೇತ್ರ ವಿಂಗಡಣೆಯಿಂದ ಶೇ 50ರಷ್ಟು ಸೀಟುಗಳ ಹೆಚ್ಚಳದ ನೆಪದಲ್ಲಿ ಬಿಜೆಪಿ ತನ್ನ ಗುಪ್ತ ಅಜೆಂಡಾ ಜಾರಿಗೆ ಮುಂದಾಗಿ ಪೆಚ್ಚಾಗಿದೆ ಎಂದು ಟೀಕಿಸಿದರು.
ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ವರ್ಗಕ್ಕೆ ಪ್ರತ್ಯೇಕ ಮೀಸಲಾತಿ ಜಾರಿಗೆ ತರಬೇಕು. ಪಂಚಾಯಿತಿ ಮಟ್ಟದಲ್ಲಿರುವ ಮೀಸಲಾತಿ ಮಾದರಿಯಲ್ಲಿ ಲೋಕಸಭೆಯಲ್ಲಿ ಮೀಸಲಾತಿ ಜಾರಿಯಾಗಬೇಕು ಎಂದರು. ಈ ವೇಳೆ, ಕೆಡಿಪಿ ಸದಸ್ಯೆ ಸುಕನ್ಯಾ, ಭೂ ನ್ಯಾಯ ಮಂಡಳಿ ಸದಸ್ಯೆ ಲೇಖ, ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟರಾಜು ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net