ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

 ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್​ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್​ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ
  • ರಾಮನಗರ ಬಿಜೆಪಿ ಮುಖಂಡರಿಂದ ಪ್ರತಿಭಟನೆ
ರಾಮನಗರ : ಬಿಜೆಪಿ ಕಾರ್ಯಕರ್ತರ ಮೇಲಿನ ಕಾಂಗ್ರೆಸ್​ ಕಾರ್ಯಕರ್ತರ ಹಲ್ಲೆ ಹಾಗೂ ಕಾಂಗ್ರೆಸ್​ ಗೂಂಡ ವರ್ತನೆ ತೋರುತ್ತಿದೆ ಎಂದು ಆರೋಪಿಸಿ ಶುಕ್ರವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರು ಕಾಂಗ್ರೆಸ್​ ಕಾರ್ಯಕರ್ತರ ಧೋರಣೆಯನ್ನು ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕಾಂಗ್ರೆಸ್​ನ ಗೂಂಡ ಕಾರ್ಯಕರ್ತರನ್ನು ಬಂಧಿಸಬೇಕೆಂದು ಆಗ್ರಹಿಸಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಆನಂದ ಸ್ವಾಮಿ ಮಾತನಾಡಿ, ಎರಡು ದಿನಗಳ ಹಿಂದೆ ರಾಜ್ಯ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುವ ಸಮಯದಲ್ಲಿ ಕಾಂಗ್ರೆಸ್​ ಗೂಂಡ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಇದನ್ನು ವಿರೋಧಿಸಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಎಲ್ಲರಿಗೂ ಅವರದ್ದೇ ಆದಂತಹ ಶಕ್ತಿ ಇರುತ್ತದೆ.ಆದರೆ, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಂಯಮದಿಂದ ಇದ್ದು, ಕಾನೂನಾತ್ಮಕವಾಗಿ ಹೋರಾಟಕ್ಕೆ ಮುಂದಾಗಿದ್ದಾರೆ ಎಂದರು.
ಕಾಂಗ್ರೆಸ್​ ರಾಜ್ಯಾಧ್ಯಕ್ಷ ಬಿ.ಕೆ.ಹರಿಪ್ರಸಾದ್​ ಸ್ವತಃ ಗೂಂಡ ಪ್ರವೃತ್ತಿಯವರಾಗಿದ್ದಾರೆ. ಇಂತಹ ಮನಸ್ಥಿತಿ ಹೊಂದಿರುವ ನಾಯಕರು ಮತ್ತು ಕಾಂಗ್ರೆಸ್​ ಕಾರ್ಯಕರ್ತರಿಂದ ಬೇರೆ ಏನನ್ನು ನಾವು ನಿರೀಕ್ಷಿಸಲು ಸಾಧ್ಯ. ನಮ್ಮ ನಾಯಕರಾದ ಅಶ್ವಥ್​ ನಾರಾಯಣ್​, ಬಿ.ಪಿ.ಹರೀಶ್​, ರಾಮಮೂರ್ತಿ ಅವರಿಗೆ ಮೊಟ್ಟೆಯಲ್ಲಿ ಹೊಡೆದಿದ್ದಾರೆ.
ನೀಟ್​ ಪರೀಕ್ಷೆ ಸೋರಿಕೆ ಸಂಬಂಧ ಹೋರಾಟ ಮಾಡುತ್ತಿದ್ದಾರೆ. ಇದಾದ ಬಳಿಕ ಕೇಂದ್ರ ಸರ್ಕಾರ ಕಾನೂನು ಕ್ರಮ ತೆಗೆದುಕೊಂಡಿದೆ. ಆದರೆ, ರಾಜ್ಯದ ಕೆಪಿಎಸ್​ಸಿಯಲ್ಲಿ ಸಾಕಷ್ಟು ಹಗರಣ ನಡೆಯುತ್ತಿದೆ. ಇದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್​ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುದನ್ನು ಬಹಿರಂಗ ಪಡೆಸಬೇಕು.
ರಾಜ್ಯದಲ್ಲಿ ನಡೆಯುತ್ತಿರುವ ನೇಮಕಾತಿಯಲ್ಲಿ ಸಾಕಷ್ಟು ಅಕ್ರಮವಾಗುತ್ತಿದೆ. ಪಶು ವೈದ್ಯ ನೇಮಕಾತಿಯಲ್ಲಿ 80 ಲಕ್ಷ ಹಣ ಪಡೆಯಲಾಗುತ್ತಿದೆ. ಕಳೆದ ಎರಡು ತಿಂಗಳಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ಯಾವ ಸಚಿವರು ರಾಜೀನಾಮೆ ನೀಡಿದ್ದಾರೆ? ಪಂಜಾಬ್​ನಲ್ಲಿ ನಡೆದ ಅಕ್ರಮ ನೇಮಕಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಈ ವೇಳೆ ಯಾರು ಸಹ ರಾಜೀನಾಮೆ ನೀಡಿರಲಿಲ್ಲ. ನಾವು ಹೇಳಿದಂತೆ ಕೆಲಸ ಮಾಡುತ್ತೇವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಖಂಡಿಸಿ, ಈಗಾಗಲೇ ಕೇಂದ್ರ ಸರ್ಕಾರ ಹಲವು ಕ್ರಮ ತೆಗೆದುಕೊಂಡಿದೆ ಎಂದರು.
ಬಿಜೆಪಿ ರಾಮನಗರ ತಾಲೂಕು ಅಧ್ಯಕ್ಷ ಗೌತಮ್​ ಗೌಡ ಮಾತನಾಡಿ, ಭ್ರಷ್ಟ ಕಾಂಗ್ರೆಸ್​ ಸರ್ಕಾರ ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕರಿಗೆ ಸಾಕಷ್ಟು ತೊಂದರೆ ನೀಡುತ್ತಿದೆ. ಜೊತೆಗೆ, ದೇಶದಲ್ಲಿನ ಕಾಂಗ್ರೆಸ್​ ನಾಯಕರು ದೇಶ ವಿರೋಧಿ ಶಕ್ತಿಯೊಂದಿಗೆ ಸೇರಿಕೊಂಡು ಭಾರತ ಒಡೆಯುವ ಕೆಲಸವನ್ನು ಮಾಡುತ್ತಿದೆ. ಎಂದರು.
ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ವಿಶ್ವದಲ್ಲಿ ಖ್ಯಾತಿ ಪಡೆದುಕೊಳ್ಳುತ್ತಿದೆ. ಆದರೆ, ಕಾಂಗ್ರೆಸ್​ ಮತ್ತದರ ಅಂಗ ಪಕ್ಷಗಳು ದುಷ್ಟ ಶಕ್ತಿಗಳೊಂದಿಗೆ ಸೇರಿಕೊಂಡು ದೇಶ ಒಡೆಯಲು ಮುಂದಾಗುತ್ತಿದೆ. ದೇಶದಲ್ಲಿ ಕಾಂಗ್ರೆಸ್​ ಹಾಗೂ ವಿರೋಧ ಪಕ್ಷಗಳಿಗೆ ಯಾವುದೇ ರೀತಿಯ ನೈತಿಕತೆ ಇಲ್ಲ. ಭ್ರಷ್ಟಾಚಾರ ರಹಿತ ಹಾಗೂ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಳಂಕ ತರಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾಗಡಿ ತಾಲೂಕು ಅಧ್ಯಕ್ಷ ಪ್ರಸಾದ್​ ಗೌಡ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಕಾಳಯ್ಯ, ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್​.ಆರ್​. ನಾಗರಾಜ್​ ಮುಖಂಡರುಗಳಾದ ರುದ್ರ ದೇವರು, ಪದ್ಮನಾಭ್​, ಪಿಚ್ನಕೆರೆ ಜಗದೀಶ್​, ಗುಗಾರೆದೊಡಿ ನಾಗರಾಜ್​, ಚೌಲ್ಟ್ರಿ ಸುರೇಶ್​, ಪ್ರಕಾಶ್​, ಚನ್ನಪ್ಪ, ನಾಗಮ್ಮ, ಲಕ್ಷಿ$್ಮ, ಮಹಾದೇವ್​, ರಂಗಸ್ವಾಮಿ, ರಾಮಣ್ಣ, ಜಗನ್ನಾಥ್​, ಮೆಡಿಕಲ್​ ಸುರೇಶ್​ , ಪ್ರಶಾಂತ್​, ಕೃಷ್ಣ, ಬೊಮ್ಮಯ್ಯ, ಭದ್ರಿನಾಥ್​, ಮುಂತಾದವರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net