ನಲ್ಲಿಗುಡ್ಡೆ ಕೆರೆಯಲ್ಲಿ ಯುವಕನ ಶವ ಪತ್ತೆ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಬಿಡದಿ: ಸಮೀಪದ ನಲ್ಲಿಗುಡ್ಡೆ ಕೆರೆಯಲ್ಲಿ ಶುಕ್ರವಾರ ಯುವಕನ ಶವ ಪತ್ತೆಯಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೊಮ್ಮನಹಳ್ಳಿಯ ಬಿ.ಎನ್​.ಮೋಹನ್​ (36) ಮೃತ ಯುವಕ ಎಂದು ಗುರುತಿಸಲಾಗಿದೆ.
ಬೆಂಗಳೂರು ಮಹಾನಗರ ಕೆಂಗೇರಿಯಲ್ಲಿ ವಾಸವಿದ್ದ ಮೋಹನ್​ ಹೊಸ ಮನೆಗಳಿಗೆ ಹೋಂ ಥಿಯೇಟರ್​ ಅಳವಡಿಕೆ ಕೆಲಸ ಮಾಡುತ್ತಿದ್ದ. ಕಳೆದ ಮಂಗಳವಾರ ಬಿಡದಿಯ ನಲ್ಲಿಗುಡ್ಡೆ ಕೆರೆ ಕಡೆಗೆ ಬಂದವನು ಅಲ್ಲಿಂದ ಕಾಣೆೆಯಾಗಿದ್ದ. ಶುಕ್ರವಾರ ಬೆಳಗ್ಗೆ ಮೃತ ದೇಹ ಕೆರೆಯ ದಡದಲ್ಲಿ ತೇಲಿ ಬಂದಿದ್ದು. ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಿಡದಿ ಪೊಲೀಸರು ಸ್ಥಳಕ್ಕೆ ಬಂದು ಮೃತದೇಹವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net