ಮಧ್ಯಾಹ್ನ 12.35ರ ಸುಮಾರಿಗೆ ಕೋರ್ಟ್ ನಲ್ಲಿ ಹನ್ನೆರಡು ಆರ್.ಡಿ.ಎಕ್ಸ್ ಬಾಂಬ್ ಇಟ್ಟಿರುವುದಾಗಿ ಇಮೇಲ್ ಬಂದಿರುವುದನ್ನು ಗಮನಿಸಿದ ನ್ಯಾಯಾಧೀಶರು, ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತಂದಿದ್ದಾರೆ. ತಕ್ಷಣ ಅಲರ್ಟ್ ಆದ ಪೊಲೀಸರು ನ್ಯಾಯಾಲಯದ ಆವರಣಕ್ಕೆ ಬಂದರು. ಕೋರ್ಟ್ ಒಳಗಡೆ ಇದ್ದ ನ್ಯಾಯಾಧೀಶರು, ಸಿಬ್ಬಂದಿ, ವಕೀಲರು ಹಾಗೂ ಹೊರಭಾಗದಲ್ಲಿದ್ದ ಸಾರ್ವಜನಿಕರನ್ನು ಹೊರಕ್ಕೆ ಕಳಿಸಿದರು. ಕೋರ್ಟ್ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಸಹ ತೆರವುಗೊಳಿಸಿದವರು.