'ಲಾರಿಗೆ ಡಿಕ್ಕಿ' ಹೊತ್ತಿ ಉರಿದ ಕಾರು

ರಾಮನಗರ ತಾಲೂಕಿನ ಸಂಗನಬಸವನದೊಡ್ಡಿ ಬಳಿಯ ಎಕ್ಸ್​ಪ್ರೆಸ್​ ಹೈವೇಯಲ್ಲಿ ಹಾಲಿನ ಟ್ಯಾಂಕರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.
ರಾಮನಗರ ತಾಲೂಕಿನ ಸಂಗನಬಸವನದೊಡ್ಡಿ ಬಳಿಯ ಎಕ್ಸ್​ಪ್ರೆಸ್​ ಹೈವೇಯಲ್ಲಿ ಹಾಲಿನ ಟ್ಯಾಂಕರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.
Published on
ರಾಮನಗರ: ತಾಲೂಕಿನ ಸಂಗನ ಬಸವನದೊಡ್ಡಿ ಬಳಿಯ ಬೆಂಗಳೂರು&ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಭಾನುವಾರ ಸಂಜೆ ಹಾಲಿನ ಟ್ಯಾಂಕರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟುಕರಕಲಾಗಿದೆ.
ಅದೃಷ್ಟವಶಾತ್​ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಕಾರು ತೆರಳುತ್ತಿತ್ತು. ಈ ವೇಳೆ ಚಾಲಕರ ನಿಯಂತ್ರಣ ತಪ್ಪಿ ಕಾರು ಹಾಲಿನ ಕ್ಯಾಂಟರ್​ಗೆ ಡಿಕ್ಕಿ ಹೊಡೆದಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾರನ್ನು ಆವರಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರಾದರೂ ಅಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರೀನ ಮಾಲೀಕರು, ಪ್ರಯಾಣಿಸುತ್ತಿದ್ದವರು ಯಾರೆಂದು ತಿಳಿದು ಬಂದಿಲ್ಲ. ರಾಮನಗರ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮನಗರ ವೃತ್ತ ನಿರೀಕ ಕೃಷ್ಣ, ಸಂಚಾರಿ ಠಾಣೆ ಸಬ್​ಇನ್​ಸ್ಪೆಕ್ಟರ್​ ಪುರಂದರ್​ ಸ್ಥಳ ಪರಿಶೀಲಿಸಿದರು.
ಟ್ರಾಫಿಕ್​ ಜಾಮ್​
ಕಾರಿಗೆ ಬೆಂಕಿ ಬೀಳುತ್ತಲೇ ರಸ್ತೆಯಲ್ಲಿ ಸಂಚರಿಸುತಿದ್ದ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಭಾನುವಾರವಾದ ಕಾರಣ ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಹೆಚ್ಚಾಗಿದ್ದವು. ಸಂಚಾರ ಮತ್ತು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ವಾಹನ ದಟ್ಟಣೆ ನಿಯಂತ್ರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net