ಕುಣಿಗಲ್ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದಾಗ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಲ್ಲಿದ್ದವರು ಸ್ಥಳಿಯರ ಸಹಾಯದಿಂದ ಹೊರಬಂದಿದ್ದಾರೆ. ಅಷ್ಟರಲ್ಲಿ ಇಡೀ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ವಾಹನ ಸ್ಥಳಕ್ಕೆ ಬಂದು ಬೆಂಕಿ ನಂದಿಸಿತು. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.