

ಪ್ರಮುಖ ಮುಖ್ಯಾಂಶಗಳು
ರಾಮನಗರ: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವುದನ್ನು ಖಂಡಿಸಿ ರೈತ ಮತ್ತು ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತಾಗಿದೆ.
ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಹಾಗೂ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆ ಮಾಡದಂತೆ ಆಗ್ರಹಿಸಿ ಗುರುವಾರ ರಾಜ್ಯ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲು ಸಹ ಬಂದ್ ನಡೆಸಲು ವಿವಿಧ ಸಂಘಟನೆಗಳು ಮುಂದಾಗಿದ್ದವು. ಆದರೆ ಈ ಹೋರಾಟಕ್ಕೆ ಸಾರ್ವಜನಿಕರಿಂದ ಮತ್ತು ವರ್ತಕರಿಂದ ಯಾವುದೇ ಬೆಂಬಲ ದೊರೆಯದ ಕಾರಣ ಬಂದ್ ಸಂಪೂರ್ಣ ವಿಫಲವಾಯಿತು.
ಎಂದಿನಂತೆ ಜೀವನ:
ಜಿಲ್ಲಾ ಕೇಂದ್ರ ರಾಮನಗರ ಸೇರಿದಂತೆ ಬಹುತೇಕ ಕಡೆಗಳಲ್ಲಿ ಜನತೆ ಬಂದ್ ಗೆ ಯಾವುದೇ ಮನ್ನಣೆ ನೀಡಲೇ ಇಲ್ಲ.ಇದರಿಂದ ಜನ ಜೀವನ ಸಾಮಾನ್ಯವಾಗಿತ್ತು. ಬಸ್, ಆಟೋ ಸಂಚಾರ ಎಂದಿನAತಿದ್ದರೆ, ಸಾರಿಗೆ ನಿಗಮದ ಎ¯್ಲÁ ಬಸ್‌ಗಳು ಎಂದಿನAತೆ ಕಾರ್ಯಾಚರಣೆ ನಡೆಸಿದವು. ಇದರ ಜತೆಗೆ ಪ್ರಮುಖ ವ್ಯಾಪಾರ ಕೇಂದ್ರಗಳಲ್ಲಿ ಜನ ಜಂಗುಳಿಯೂ ಸಾಮಾನ್ಯವಾಗಿತ್ತು. ಅಂಗಡಿ ಮುಂಗಟ್ಟುಗಳು ಎಂದಿನAತೆ ತೆರೆದಿದ್ದವು. ಬಂದ್ ಹೊರತಾಗಿಯೂ ಬೆಂಗಳೂರು ಮೈಸೂರು ಹೆದ್ದಾರಿ ಸಂಚಾರ ಎಂದಿನAತೆ ಇತ್ತು. ಶಾಲಾ ಕಾಲೇಜುಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಿದವು.
ಬಂದೋಬಸ್ತ್
ಬಂದ್ ಹಿನ್ನೆಲೆಯಲ್ಲಿ ಜಿ¯್ಲೆಯಾಧ್ಯಂತ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಸ್ಥಳೀಯ ಡಿಎಆರ್ ತುಕಡಿಗಳ ಜತೆಗೆ ಕೆಎಸ್‌ಆರ್‌ಪಿ ಪಡೆ ಸ್ಥಳೀಯ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೂಕ್ಷö್ಮ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿತ್ತು.
ಪ್ರತಿಭಟನೆ
ಬಂದ್ ಹಿನ್ನೆಲೆಯಲ್ಲಿ ಕರುನಾಟ ಸೇನೆ ಮತ್ತು ರಾಜ್ಯ ರೈತ ಸಂಘ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದವು. ಮುಂಜಾನೆಯೇ ಕರುನಾಡ ಸೇನೆಯ ಕೆಲವು ಕಾರ್ಯಕರ್ತರು ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಇವರನ್ನು ಬಂಧಿಸಿ ಕರೆದೋಯ್ದರು.
ನಂತರ ರೈತ ಸಂಘದ ಕಾರ್ಯಕರ್ತರು ಬೆಂಗಳೂರು - ಮೈಸೂರು ಹೆದ್ದಾರಿಯನ್ನು ತಡೆದು ಅರ್ಧ ಗಂಟೆಗೂ ಹೆಚ್ಚುಕಾಲ ಪ್ರತಿಭಟನೆ ನಡೆಸಿ ರಾಜ್ಯ, ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಸಿಕ್ಕಾಗಿ ವಾಹನ ಸವಾರರು ಪರಾದಾಡುವಂತೆ ಆಯಿತು. ಈ ವೇಳೆ ಪೊಲೀಸರು ವಾಹನಗಳಿಗೆ ಬದಲಿ ಮಾರ್ಗಗಳ ಮೂಲಕ ತೆರಳು ಅವಕಾಶ ಮಾಡಿಕೊಟ್ಟರು.
ಒಂದು ಹಂತದಲ್ಲಿ ಪ್ರತಿಭಟನಾಕಾರರನ್ನು ವಾಹನ ಸಂಚಾರಕ್ಕೆ ತಡೆಯೊಡ್ಡದಂತೆ ಮನವಿ ಮಾಡಿ, ತೆರವುಗೊಳಿಸಲು ಮುಂದಾದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ರೈತ ಸಂಘದ ಹಲವು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಮಲ್ಲಯ್ಯ, ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವೇ ಅವೈಜ್ಞಾನಿಕ. ಇದರ ಜತೆಗೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕು ರಾಜ್ಯದ ರೈತರ ಹಿತವನ್ನು ಬಲಿಕೊಟ್ಟು ತಮಿಳುನಾಡಿಗೆ ನೀರು ಬಿಡಬಾರದು. ಒಂದು ವೇಳೆ ಸರ್ಕಾರ ಒತ್ತಡಕ್ಕೆ ಮಣಿದು ನೀರು ಬಿಟ್ಟರೆ ಇದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮತ್ತೊರ್ವ ಮುಖಂಡ ಕುಮಾರಸ್ವಾಮಿ ಮಾತನಾಡಿ, ಡಿ.ಕೆ.ಶಿವಕುಮಾರ್ ರಾಜ್ಯದ ರೈತರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಪ್ರತಿ ಬಾರಿ ರಾಜ್ಯಕ್ಕೆ ಅನ್ಯಾಯವಾಗುತ್ತಲೇ ಇದ್ದು, ಇದನ್ನು ಶಾಶ್ವತವಾಗಿ ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರಗಳು ವಿಫಲವಾಗಿದೆ. ಈಗೇನಾದರೂ ಮತ್ತೆ ತಮಿಳುನಾಡಿನ ಹಿತ ಕಾಯುವ ಕೆಲಸ ಮಾಡಿದರೆ, ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.
ಪ್ರತಿಭಟನೆಯಲ್ಲಿ ಚೀಲೂರು ಮುನಿರಾಜು, ಪುಟ್ಟಸ್ವಾಮಿ, ಜಿಲ್ಲಾಧ್ಯಕ್ಷ ಕೃಷ್ಣಯ್ಯ, ಪ್ರಧಾನ ಕಾರ್ಯದಶಿ ನಾಗರಾಜು, ಮುಖಂಡರಾದ ಎನ್.ವೆಂಕಟೇಶ್, ತಿಮ್ಮೇಗೌಡ, ಮುಂತಾದವರು ಇದ್ದರು.