ದ್ವಿಚಕ್ರ ವಾಹನ ಮತ್ತು ಟಿಪ್ಪರ್ ಲಾರಿ ನಡುವೆ ಪರಸ್ಪರ ನಡೆದ ಅಪಘಾತದಲ್ಲಿ ದಂಪತಿಗಳಿಬ್ಬರು ಸಾವನಪ್ಪಿರುವ ಘಟನೆ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗುಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾಧನಪಾಳ್ಯ ಗೇಟ್ ಬಳಿ ಮಂಗಳವಾರ ಜರುಗಿದೆ.
ಮೃತ ರನ್ನು ಆಂಧ್ರ ಮೂಲದ ವಿನೋದ್ ಕುಮಾರ್ ಚಾರ್ಲ್ಸ್ (28), ಈತನ ಪತ್ನಿ ಶೇಕ್ ಜುಬೇದ (25) ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ಪತಿ ವಿನೋದ್ ಕುಮಾರ್ ಸ್ಥಳದಲ್ಲಿ ಸಾವನ್ನಪ್ಪಿದ್ದರೆ ಪತ್ನಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.
ದಂಪತಿಗಳಿಬ್ಬರು ಗಾರೆ ಕೆಲಸ ಮಾಡುತ್ತಿದ್ದು ಎಂದಿನಂತೆ ತಮ್ಮ ಮೇಸ್ತ್ರಿ ಜಿಗಣಿಗೆ ಬರುವಂತೆ ಹೇಳಿದ್ದು ದ್ವಿಚಕ್ರ ವಾಹನದಲ್ಲಿ ಬೆಂಗಳೂರು ಮುಖ್ಯರಸ್ತೆಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು ದಿಂಡುಗಲ್ಲು ತುಂಬಿಕೊಂಡು ಬರುತ್ತಿದ್ದ ಎಸ್ ಎಸ್ ಕೆ ಟಿ ಟಿಪ್ಪರ್ ಲಾರಿಯ ಅಪಘಾತ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ .
ಕಗ್ಗಲಿಪುರ ಠಾಣೆ ಇನ್ಸ್ಪೆಕ್ಟರ್ ನಂಜೇಗೌಡ ಮತ್ತು ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವಗಳನ್ನು ಶವ ಪರೀಕ್ಷೆ ನಡೆಸಿದ್ದಾರೆ. ಕಗ್ಗಲಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.