ಸಿಡಿಲಿಗೆ ಹಸು ಬಲಿ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಕನಕಪುರ: ತಾಲೂಕಿನಲ್ಲಿ ಸೋಮವಾರ ಸಂಜೆ ಸಿಡಿಲಿನ ಆರ್ಭಟದೊಂದಿಗೆ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದ್ದಾಗ ಮನೆಯ ಮುಂದೆ ಕಟ್ಟಿಹಾಕಿದ್ದ ಹಸು ಸಿಡಿಲು ಬಡಿದು ಮೃತಪಟ್ಟಿದೆ.
ಸಾತನೂರು ಹೋಬಳಿ ಕಂಚನಹಳ್ಳಿ ಗ್ರಾಮದ ಚಂದ್ರಪ್ಪ ಅವರ ಹಳ್ಳಿಕಾರ್​ ನಾಟಿ ಹಸು ಬಲಿಯಾಗಿದೆ. ಕೆಲದಿನಗಳಲ್ಲೇ ಕರು ಹಾಕುವಂತಿತ್ತು. ಮಳೆ ನಂತರ ಹಸುವನ್ನು ಕೊಟ್ಟಿಗೆಗೆ ಕಟ್ಟಿಹಾಕಲು ಹೋದಾಗ ಹಸು ಮೃತಪಟ್ಟಿರುವುದು ಗೊತ್ತಾಗಿದೆ. ಪಶುವೈದ್ಯಾಧಿಕಾರಿ ಡಾ.ಕಿರಣ್​, ಗ್ರಾಪಂ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಂತರ ಪರೀೆಯಲ್ಲಿ ಹಸು ಗರ್ಭ ಧರಿಸಿರುವುದು ಗೊತ್ತಾಗಿದೆ. ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net