ಮಂಚನಬೆಲೆ ಜಲಾಶಯದಲ್ಲಿ ಈಜಲು ಹೋಗಿ ಸಾವು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಮಾಗಡಿ: ಮಂಚನಬೆಲೆ ಜಲಾಶಯಕ್ಕೆ ಈಜಲು ಹೋಗಿದ್ದ ಒಡಿಶಾ ಮೂಲದ ರಾಕೇಶ್​ (27) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಈತ ಬೆಂಗಳೂರಿನ ವೈಟ್​ಫೀಲ್ಡ್​ ಬಳಿ ಕಂಪನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್​ ಆಗಿದ್ದ.
ಭಾನುವಾರ ರಜೆ ಇದ್ದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಮಂಚನಬೆಲೆ ಜಲಾಶಯಕ್ಕೆ ಪ್ರವಾಸಕ್ಕೆ ಬಂದಿದ್ದು, ಜಲಾಶಯದಲ್ಲಿ ಈಜಲು ಇಳಿದಿದ್ದಾರೆ. ಆದರೆ, ನೀರಿನ ಆಳದ ಅರಿವಿಲ್ಲದೆ ರಾಕೇಶ್​ ಮುಳುಗಿ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮನಗರ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಬಿ.ಜಿ.ಉತ್ತಪ್ಪ ನೇತೃತ್ವದಲ್ಲಿ ಸಿಬ್ಬಂದಿ ಎಂ.ಮೂರ್ತಿ, ಅಮೃತೇಶ್​, ಸಿದ್ದಣ್ಣ ಮಗದೂಮ್​ ಹಾಗೂ ಮಹೇಶ್​ ಪೂಜಾರಿ ತಂಡವು ಕಾರ್ಯಾಚರಣೆ ನಡೆಸಿ, ಯುವಕನ ಮೃತದೇಹ ಹೊರತೆಗೆದರು. ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net