ಕ್ಯಾಂಟರ್​ಗೆ ಬೈಕ್​ ಡಿಕ್ಕಿಯಾಗಿ ಸಾವು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಮಾಗಡಿ: ಚಂದೂರಾಯನಹಳ್ಳಿ ಬಳಿ ರಸ್ತೆಯಲ್ಲಿ ನಿಲ್ಲಿಸಿದ ಕ್ಯಾಂಟರ್​ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಭೀರ ಗಾಯಗೊಂಡಿದ್ದಾರೆ.
ತಾಲೂಕಿನ ಪಾಪಿರಂಗಯ್ಯನ ಪಾಳ್ಯದ ಉಪೇಂದ್ರ (23) ಮೃತ. ಚಂದೂರಾಯನಹಳ್ಳಿ ಸಾಗರ್​ (21) ಹಾಗೂ ಜಾನಗೆರೆಯ ಜೀವನ್​ ಆಲಿಯಾಸ್​ ಪವನ್​ (20) ಗಾಯಾಳುಗಳು. ಮಂಗಳವಾರ ಪಟ್ಟಣದಿಂದ ಚಂದೂರಾಯನಹಳ್ಳಿ ಕಡೆಗೆ ಮೂವರು ಬೈಕ್​ನಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ ನಿಂತಿದ್ದ ಕ್ಯಾಂಟರ್​ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ.
ಗಾಯಾಳುಗಳಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹವನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಉಪೇಂದ್ರ ಪಟ್ಟಣದ ಸರ್ಕಾರಿ ಪದವಿ ಪೂರ್ವಕಾಲೇಜುನಲ್ಲಿ ಅಂತಿಮ ಬಿಎ ವ್ಯಾಸಂಗ ಮಾಡುತ್ತಿದ್ದ.
ಮಾಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
10 ಎಂಜಿಡಿ 4
ಉಪೇಂದ್ರ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net