ಜು.10ರಂದು ರಾತ್ರಿ 8 ಗಂಟೆ ಸುಮಾರಿಗೆ ಬೆಂಗಳೂರು ರಸ್ತೆ ಟೆಂಪೂ ಸ್ಟಾಂಡ್ ಬಳಿ ನಿಂತಿದ್ದ ಕುಮಾರ್ಗೆ ಅಯ್ಯಪ್ಪಸ್ವಾಮಿ ದೇವಾಲಯದ ಕಡೆಯಿಂದ ಬಂದ ಬೈಕ್ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರಿಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿತ್ತು. ಕನಕಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.