ವಿವಿಧ ಕಡೆಗಳಲ್ಲಿ ಇದೇ ರೀತಿ ದರೋಡೆ ಮಾಡಿದ್ದ 3 ಕಾರು, 6 ದ್ವಿಚಕ್ರ ವಾಹಗಳು, 1 ಆಟೋ ಹಾಗೂ ಕೃತ್ಯಕ್ಕೆ ಬಳಸಿದ್ದ ಮಾರಕಾಸಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಡದಿ, ಕನಕಪುರ, ಚನ್ನಪಟ್ಟಣ, ಮಳವಳ್ಳಿ, ಶಿವಮೊಗ್ಗ, ಶ್ರೀರಂಗಪಟ್ಟಣ ಪೊಲೀಸ್ ಠಾಣೆಗಳ ವ್ಯಾಪ್ತಿ ಸೇರಿ ಒಟ್ಟು 10 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ.