_1787055517960.webp?w=480&auto=format%2Ccompress&fit=max)
_1787055517960.webp?w=480&auto=format%2Ccompress&fit=max)
ಪ್ರಮುಖ ಮುಖ್ಯಾಂಶಗಳು
ರಾಮನಗರ
ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಸಾರ್ವಜನಿಕರಿಗೆ ಸಕಾಲದಲ್ಲಿ ಉತ್ತಮ ಸೇವೆ ನೀಡಲು, ಎಲ್ಲ ಇಲಾಖೆಯ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಅಭಿವೃದ್ಧಿ ಪಥದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ಅಗ್ರ ಸ್ಥಾನದಲ್ಲಿ ಕೊಂಡೊಯ್ಯಲು ಕೈಜೋಡಿಸುವಂತೆ ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಬಾಲಕೃಷ್ಣ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ವಾತನಾಡಿದರು. ಅಧಿಕಾರಿಗಳು ಸಾರ್ವಜನಿಕರಿಗೆ ಸದಾ ಲಭ್ಯವಿದ್ದು, ಉತ್ತಮ ಕಾರ್ಯವೈಖರಿಂದ ಜನಸ್ನೇಹಿ ಆಡಳಿತ ನೀಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಬೇಕೆಂದು ತಿಳಿಸಿದರು .
ಒಬ್ಬರಿಂದ ಅಭಿವದ್ಧಿ ಸಾಧ್ಯವಿಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಕೈಜೋಡಿಸಿದರೆ ಮಾತ್ರ ಉತ್ತಮ ಕೆಲಸ ಸಾಧ್ಯ ಇದರಿಂದ ಅಭಿವೃದ್ಧಿ ಸಾಧ್ಯವಾಗಲಿದೆ. ಪ್ರಾವಾಣಿಕತೆಯಿಂದ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕೆಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿಲ್ಲೆಯ ಅಧಿಕಾರಿಗಳು ಹೆದರಿಕೊಂಡು ಕೆಲಸ ವಾಡುವ ಅವಶ್ಯಕತೆ ಇಲ್ಲ. ಸಕಾರಣವಿಲ್ಲದೆ ಅನಾವಶ್ಯಕವಾಗಿ ಕಚೇರಿಗೆ ಗೈರಾಗುವಂತಿಲ್ಲ, ನೆಪ ಹೇಳಿ ಕೆಲಸದಿಂದ ನುಣುಚಿಕೊಳ್ಳುವಂತಿಲ್ಲ. ಅಧಿಕಾರಿಗಳು ಸಾರ್ವಜನಿಕರಿಗೆ ಮಧ್ಯಾಹ್ನ 3:30 ರಿಂದ 5.30 ರವರೆಗೆ ಭೇಟಿಗೆ ಅವಕಾಶ ಕಲ್ಪಿಸಬೇಕು ಎಂದರು.
ಮುಖ್ಯಮಂತ್ರಿಗಳ ಜಿಲ್ಲೆಯಾಗಿರುವುದರಿಂದ ಸಾರ್ವಜನಿಕರು, ಮಾಧ್ಯಮದವರು, ಪ್ರತಿಯೊಬ್ಬರೂ ಜಿಲ್ಲೆಯ ಆಗುಹೋಗುಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯು ಚಿಕ್ಕ ಜಿಲ್ಲೆಯಾಗಿದ್ದು, ಜಿಲ್ಲೆಗೆ ಗೌರವ ತರುವ ರೀತಿ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ತಿಳಿ ಹೇಳಿದರು.
ಸಾರ್ವಜನಿಕರು, ಸರ್ಕಾರಿ ಕಚೇರಿಗಳಿಗೆ ಅಲೆದಾಡಬಾರದೆಂಬ ಸದುದ್ದೇಶದಿಂದ ಮುಖ್ಯಮಂತ್ರಿಗಳು ತಮ್ಮ ಕನಸಿನ ಇಲಾಖೆಯಾದ ಪ್ರಜಾಸೇವೆ ಇಲಾಖೆಯನ್ನು ಆರಂಭಿಸಿದ್ದಾರೆ. ಸಾರ್ವಜನಿಕರ ಹಿತಾಸಕ್ತಿಯಿಂದ ಪ್ರತಿಯೊಬ್ಬರೂ ಉತ್ತಮವಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿಯಲ್ಲಿ ಪ್ರಥಮವನ್ನಾಗಿಸಲು ಪಣತೊಡೋಣ ಎಂದರು.
ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಯಶವಂತ್ ವಿ ಗುರುಕರ್ ಅವರು ಜಿಲ್ಲೆಯಲ್ಲಿ ಕೈಗೊಳ್ಳಲಾದ ಹಾಗೂ ಕೈಗೊಳ್ಳಬೇಕಾದ ಕಾರ್ಯಕ್ರಮಗಳು, ಯೋಜನೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಮಗ್ರ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಕೆ ರಾಜು, ಜಿಪಂ ಸಿಇಒ ಅನ್ಮೋಲ್ ಜೈನ್, ಎಸ್‌ಪಿ ಆರ್. ಶ್ರೀನಿವಾಗೌಡ. ಎಡಿಸಿ ಆರ್. ಚಂದ್ರಯ್ಯ ಸೇರಿ ಎಲ್ಲ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಜಿಲ್ಲೆಯ ಜನರಿಗೆ ಉತ್ತಮ ರಸ್ತೆ, ಚರಂಡಿ, ವಸತಿ, ಆಹಾರ, ಕುಡಿಯುವ ನೀರು ಸೌಲಭ್ಯ ಕಲ್ಪಿಸುವ, ಶಾಲೆ, ಆಸ್ಪತ್ರೆ ಅಭಿವದ್ಧಿ, ಇನ್ನಿತರ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದ್ದು, ಅಧಿಕಾರಿಗಳು ಅಭಿವದ್ಧಿ ಕೆಲಸಗಳಿಗೆ ಚುರುಕು ನೀಡುವ ಮೂಲಕ ಶ್ರಮವಹಿಸಿ ಕಾರ್ಯನಿರ್ವಹಿಸಬೇಕು.
ಇಕ್ಬಾಲ್ ಹುಸೇನ್, ಶಾಸಕ