ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಸಾವು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಮಾಗಡಿ: ದೊಡ್ಡಯ್ಯನ ಪಾಳ್ಯದ ರಸ್ತೆಯ ಬಳಿ ಭಾನುವಾರ ಸಂಜೆ ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ರೈತ ಚಿಕಿತ್ಸೆ ಲಿಸಿದೆ ಮೃತಪಟ್ಟರು.
ತಾಲೂಕಿನ ಹೊಸಪಾಳ್ಯ ಗ್ರಾಮದ ರಂಗಸ್ವಾಮಯ್ಯ(58) ಮೃತ.ಜಮೀನಿನಲ್ಲಿ ಕೆಲಸ ಮುಗಿಸಿ ಗ್ರಾಮಕ್ಕೆ ಬೈಕ್​ನಲ್ಲಿ ಹಿಂದಿರುಗುವಾಗ ಹೊಸಪಾಳ್ಯ ಬಳಿ ಕುಣಿಗಲ್​ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ರಂಗಸ್ವಾಮಯ್ಯ ಅವರ ತಲೆಗೆ ರಸ್ತೆ ಪಕ್ಕದ ಚರಂಡಿ ಕಲ್ಲು ಬಡಿದಿದ್ದು, ಗಂಭೀರಗಾಯಗೊಂಡ ಅವರನ್ನು ಮಾಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಚೇತರಿಕೆ ಕಾಣದ ಅವರನ್ನು ಮತ್ತೆ ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಿಲ್ಲ ಎನ್ನಲಾಗಿದೆ.
ಅಪಘಾತ ಬಳಿಕ ಕಾರಿನೊಂದಿ ಪರಾರಿಯಾಗಿದ್ದ ಚಾಲಕನನ್ನು ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ, ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೃತರಿಗೆ ಪತ್ನಿ, ಪುತ್ರಿ, ಪುತ್ರ ಇದ್ದಾರೆ. ಸೋಮವಾರ ಅಂತ್ಯಕ್ರಿಯೆ ನಡೆಯಿತು. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net