ರಾಮನಗರ ನಗರಸಭೆಯಲ್ಲಿ ಅಧ್ಯಕ್ಷ ಕೆ.ಶೇಷಾದ್ರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾಜಿ ಅಧ್ಯೆ ಪಾರ್ವತಮ್ಮ, ಉಪಾಧ್ಯಕ್ಷ ಗಿರಿಜಮ್ಮ ಮುಂತಾದವರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಪ್ರತಿಭಟನೆ
ಉಪವಾಸ ಸತ್ಯಾಗ್ರಹ ಮಾಡಲು ನಿರ್ಧಾರ
ರಾಮನಗರ: ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಹಿನ್ನೆಲೆಯಲ್ಲಿ ದೆಹಲಿ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ನೈತಿಕ ಬೆಂಬಲ ನೀಡಿ ಜು.27ರ ಸೋಮವಾರ ಇಡೀ ದಿನ ಉಪವಾಸ ಸತ್ಯಗ್ರಹ ಮಾಡಲಾಗುತ್ತದೆ ಎಂದು ರಾಮನಗರ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.
ನಗರಸಭೆ ತಮ್ಮ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಇಡೀ ರಾಮನಗರ ನಗರಸಭೆ ಸದಸ್ಯರು ಹಾಗೂ ಸಾರ್ವಜನಿಕರು, ಸಂಘ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡುವ ಎಲ್ಲರೂ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ ಎಂದರು.
ಸೋಮವಾರ ಬೆಳಗ್ಗೆ 9ಗಂಟೆಗೆ ಉಪವಾಸ ಸತ್ಯಾಗ್ರಹ ಆರಂಭವಾಗಲಿದ್ದು, ಸಂಜೆ 7ಗಂಟೆಗೆ ಮುಕ್ತಾಯವಾಗಲಿದೆ. ಇದಾದ ನಂತರ ನಗರದ ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಮಾರ್ಲಾಪಣೆ ಮಾಡಲಾಗುತ್ತದೆ. ನಂತರ ಕೆಂಗಲ್ ಹನುಮಂತಯ್ಯ ಪ್ರತಿಮೆಯಿಂದ ನಗರದ ವಾಟರ್ ಟ್ಯಾಂಕ್ ಸರ್ಕಲ್ ತನಕ ಪಂಜಿನ ಮೆರವಣಿಗೆ ನಡೆಸಲಾಗುತ್ತದೆ ಎಂದರು.
ಈ ಎರಡು ಕಾರ್ಯಕ್ರಮಗಳಿಗೆ ನಗರದ ಜನತೆ ಹಾಗೂ ಸಂಘ ಸಂಸ್ಥೆ ಮುಖಂಡರು ವಿವಿಧ ಪಕ್ಷದ ಕಾರ್ಯಕರ್ತರು ಹಾಗೂ ಇತರರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ದೇಶದಲ್ಲಿ ಈ ತನಕ ಒಟ್ಟು 21 ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆಯನ್ನು ವಿರೋಧಿಸಿ ಕಳೆದೊಂದು ತಿಂಗಳಿನಿಂದ ರಾಫ್ಟ್ರಿಯ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು. ವಿದ್ಯಾರ್ಥಿಗಳ ಈ ಶಾಂತಿಯುವ ಪ್ರತಿಭಟನೆಯಲ್ಲಿ ದೆಹಲಿಯ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರಿಂದ ಘಟನೆ ವಿರುದ್ಧ ದೇಶದಲ್ಲಿ ಏಕತಾ ಧ್ವನಿ ವ್ಯಕ್ತವಾಗುತ್ತಿದೆ. ರಾಹುಲ್ ಗಾಂಧಿ, ಕ್ರೀಡಾ ತಾರೆಗಳಾದ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ, ತಮಿಳು ಸಿಎಂ ಸೇರಿದಂತೆ ಎಲ್ಲರೂ ಧ್ವನಿ ಎತ್ತಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳಿಗೆ ನೈತಿಕ ಬೆಂಬಲ ನೀಡುವ ಸಲುವಾಗಿ ದಿನ ಪೂರ್ತಿ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ ಎಂದರು.
ಈ ವೇಳೆ ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ ಗುರುವೇಗೌಡ, ಸದಸ್ಯರಾದ ಪಾರ್ವತಮ್ಮ, ವಿಜಯಕುಮಾರಿ, ಅಜ್ಮತ್, ಮುತ್ತುರಾಜ್, ನಿಜಾಂ ಷರೀಪ್, ಐಯಿಶಾ ಬಾನು, ಸಮದ್ ಸೇರಿದಂತೆ ಹಲವರು ಇದ್ದರು.