ಮಾರುಕಟ್ಟೆಯಲ್ಲಿರುವ ಕೆಲವು ವಾಣಿಜ್ಯ ಅಂಗಡಿಗಳು ಮುಚ್ಚಿದ್ದರೂ, ಅವುಗಳನ್ನು ಹಸಿ ಕಸ, ಒಣ ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ಹಾಕಲು ಬಳಸಲಾಗುತ್ತಿದೆ. ಸಾರ್ವಜನಿಕ ಆಸ್ತಿಯಾಗಿರುವ ಅಂಗಡಿಗಳನ್ನು ಯಾವುದೇ ಹರಾಜು ಪ್ರಕ್ರಿಯೆ ನಡೆಸದೆ ಕಸ ವಿಲೇವಾರಿಗೆ ಬಳಸಿಕೊಳ್ಳುತ್ತಿರುವುದು ನಿಯಮಬಾಹಿರವಾಗಿದ್ದು, ನಗರಸಭೆ ಅಧಿಕಾರಿಗಳು ಸಾರ್ವಜನಿಕ ಆಸ್ತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಂಬಂಧಿಸಿದವರು ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕು.