ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಹೊಂದುಕೊಂಡತೆ ಇರುವ ಶ್ಯಾನಮಂಗಲ ಗ್ರಾಮದ ಬಳಿಯ ಜಿಎನ್ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿ. ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಲೇ ಬೆಂಕಿ ಇಡೀ ಕಾರ್ಖಾನೆ ಆವರಿಸಿತು. ಕಾರ್ಖಾನೆಯಲ್ಲಿ 40ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳತ್ತಿದಂತೆ ಕಾರ್ಮಿಕರು ಹೊರ ಬಂದಿದ್ದರು. ಲೈಟರ್‌ಗಳಿಗೆ ಗ್ಯಾಸ್‌ನಿಂದ ಗ್ಯಾಸ್ ತುಂಬಿಸಲಾಗುತಿತ್ತು. ಅದೃಷ್ಟವಷಾತ್ ಕಾರ್ಖಾನೆಯಲ್ಲಿದ್ದ ಬಹುತೇಕ ಸಿಲಿಂಡರ್‌ಗಳು ಖಾಲಿಯಾಗಿದ್ದವು. ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಕಾರ್ಖಾನೆ ಒಳಗಿದ್ದ ಮಿಷನ್‌ಗಳು, ಪೈಪ್‌ಗಳು ಸೇರಿ ಇನ್ನಿತರ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿವೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಕಚೇರಿಗೆ ಮಾಹಿತಿ ನೀಡಲಾಗಿ 5 ಅಗ್ನಿಶಾಮಕ ದಳದ ವಾಹನಗಳು ಹಾಗೂ ಸಿಬ್ಬಂದಿ ಬಂದು ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದರು. ಅಗ್ನಿಶಾಮಕ ದಳದವರು ಬರುವಷ್ಟರಲ್ಲೇ ಕಾರ್ಖಾನೆ ತುಂಬ ಬೆಂಕಿ ಹೊತ್ತಿಕೊಂಡು ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದವು. ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.