ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದ ಚುನಾವಣೆಗಳಲ್ಲಿ ಸೋಲುಕಂಡ ನಿಖಿಲ್ ಕುಮಾರಸ್ವಾಮಿ ಮತ್ತೊಮ್ಮೆ ಮಂಡ್ಯದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮಂಡ್ಯದಲ್ಲಿ ವಾಸ್ತವ್ಯ ಹೂಡಲು ಮನೆ ಹುಡುಕಾಟವೂ ಸಹ ನಡೆದಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪ್ರಾಬಲ್ಯವಿರುವ ಮಂಡ್ಯ, ರಾಮನಗರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೂ ಸಹ ಅನುಕೂಲವಾಗಲಿದೆ ಎನ್ನುವ ಲೆಕ್ಕಾಚಾರ, ಮಂಡ್ಯದಲ್ಲಿ ವಾಸ್ತವ್ಯ ಹೂಡುವುದರ ಹಿಂದೆ ಇದೆ ಎಂದು ಹೇಳಲಾಗುತ್ತಿದೆ.